ಅಬುಧಾಭಿ: ಯುಎಇಯಲ್ಲಿ (UAE) ಭೀಕರ ಸರಣಿ ಅಪಘಾತ (Accident) ಸಂಭವಿಸಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಯುಎಇಯ ಫುಜೈರಾ ಎಮಿರೇಟ್ನಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ನಿಯಂತ್ರಣ ತಪ್ಪಿ 23 ವಾಹನಗಳಿಗೆ (Truck Crash) ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಟ್ರಕ್ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ 14 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ 30 ಜನ ಗಾಯಗೊಂಡಿದ್ದಾರೆ. ಮೃತರಲ್ಲಿ ಭಾರತೀಯ ಪ್ರಜೆಗಳೂ ಸೇರಿರುವುದು ದೃಢಪಟ್ಟಿದೆ. ಇದನ್ನೂ ಓದಿ: ಯಲಹಂಕದಲ್ಲಿ ಪತ್ನಿ ಎದುರೇ ರಿಯಲ್ ಎಸ್ಟೇಟ್ ಉದ್ಯಮಿಯ ಭೀಕರ ಹತ್ಯೆ
ಅಪಘಾತದಲ್ಲಿ 5 ಟ್ರಕ್ಗಳು, 18 ಕಾರುಗಳಿಗೆ ಹಾನಿಯಾಗಿದೆ. ನಿಧಾನಗತಿಯ ಸಂಚಾರದಿಂದ ರಸ್ತೆ ಮೇಲೆ ನಿಂತಿದ್ದ ವಾಹನಗಳಿಗೆ ಟ್ರಕ್ ಬಂದು ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳ ಪೈಕಿ 15 ಮಂದಿ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದ 15 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೃತರ ಗುರುತು ಪತ್ತೆಗಾಗಿ ಅಧಿಕಾರಿಗಳು ಡಿಎನ್ಎ ಪರೀಕ್ಷೆ ನಡೆಸುತ್ತಿದ್ದಾರೆ. ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಮೃತರ ಕುಟುಂಬಗಳಿಗೆ ನೆರವು ನೀಡಲಾಗುತ್ತಿದೆ. ಇದನ್ನೂ ಓದಿ: 200 ಕಿಮೀ ವೇಗದಲ್ಲಿ ದ್ವಾರಕಾ ಎಕ್ಸ್ಪ್ರೆಸ್ ವೇ ಸುರಂಗಕ್ಕೆ ಕಾರು ಡಿಕ್ಕಿ – ಬೇರ್ಪಟ್ಟು ಹಾರಿಬಿದ್ದ ಎಂಜಿನ್, ಚಾಲಕ ಸಾವು
