– ಆತ್ಮಹತ್ಯೆಗೂ ಮುನ್ನ ಯುವತಿಗೆ ಚಾಕು ಇರಿತ
ತುಮಕೂರು: ಪ್ರೇಮಿಗಳ (Lovers) ನಡುವೆ ಕಾರಲ್ಲೇ (Car) ಗಲಾಟೆ ನಡೆದು, ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ (Shira) ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ನಾಗೇಂದ್ರ (30) ಸಜೀವ ದಹನವಾದ ವ್ಯಕ್ತಿ. ತುಮಕೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡಿದ್ದಾನೆ. ಇದರಿಂದ ಸ್ಥಳದಲ್ಲೇ ಆತ ಸಾವಿಗೀಡಾಗಿದ್ದಾನೆ. ಇದಕ್ಕೂ ಮುನ್ನ, ಕಾರಿನಲ್ಲಿದ್ದ ಯುವತಿ ತಲೆಗೆ ನಾಗೇಂದ್ರ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಆಕೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ
ಇಬ್ಬರು ಕಾರಿನಲ್ಲಿ ಬೆಂಗಳೂರಿನಿಂದ ಅಂಕೋಲಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ಮೊದಲೇ ಪೆಟ್ರೋಲ್ ಬಾಂಬ್ ತಂದಿದ್ದ ನಾಗೇಂದ್ರ
ನಾಗೇಂದ್ರ ಬಾಡಿಗೆ ಕಾರು ಮಾಡಿಕೊಂಡು, ಮೊದಲೇ ಪ್ಲ್ಯಾನ್ ಮಾಡಿ ಪೆಟ್ರೋಲ್ ಬಾಂಬ್ ತೆಗೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ. ಯುವಕ – ಯುವತಿ ಪ್ರೇಮಿಗಳಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದು ನಾವೇ – ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಜೋಡಿ
