ಹುಬ್ಬಳ್ಳಿ: ನಗರದಲ್ಲಿ (Hubballi) ಒಂದೇ ದಿನದಲ್ಲಿ ಎರಡು ಪ್ರತ್ಯೇಕ ಪೋಕ್ಸೊ (POCSO) ಪ್ರಕರಣ ದಾಖಲಾಗಿವೆ. ಶಹರ ಮತ್ತು ಅಶೋಕ್ ನಗರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತರಿಂದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಎರಡು ಪ್ರತ್ಯೇಕ ಪ್ರಕರಣಗಳು ನಡೆದಿವೆ.
ಶಹರ ಠಾಣೆ ವ್ಯಾಪ್ತಿಯಲ್ಲಿ ಮೂವರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ನಡೆದಿದೆ. ಜೊತೆಗೆ ಅಪ್ರಾಪ್ತೆಯ ತಂದೆ ಮೇಲೂ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಉತ್ತರ ಪ್ರದೇಶ | ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಹತ್ಯೆ – ಯುವತಿ ಅರೆಸ್ಟ್
ಮೊದಲನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಕ್ಕಳು ಬಿಡುವಿನ ಸಮಯದಲ್ಲಿ ಯಾರ ಜೊತೆಗೆ ಒಡನಾಟ ಇಟ್ಟುಕೊಂಡಿದ್ದಾರೆ ಎಂದು ಪಾಲಕರು ಗಮನಹರಿಸಬೇಕು. ಇಲ್ಲದಿದ್ದರೆ ಇಂತಹ ಅಪರಾಧಗಳನ್ನು ಮಾಡಿ ಭವಿಷ್ಯವನ್ನು ತಮ್ಮ ಮಕ್ಕಳು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತೆ ಎಂದು ತಿಳಿ ಹೇಳಿದ್ದಾರೆ. ಇದನ್ನೂ ಓದಿ: ಮದುವೆ ಆಗ್ತೀನಿ ಅಂತ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಸರ್ಕಾರಿ ವೈದ್ಯನಿಂದ ಅತ್ಯಾಚಾರ

