ಚಿಕ್ಕಬಳ್ಳಾಪುರ: ಮುಖ್ಯ ಚುನಾವಣಾಧಿಕಾರಿ (Chief Election Commissioner) ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿ ತಕ್ಷಣ ಸೇವೆಯಿಂದ ವಜಾ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಹೇಳಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಶ್ ಕುಮಾರ್ ಬಿಜೆಪಿ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ. ದೇಶದಲ್ಲಿ ಕೋಟ್ಯಂತರ ಮತದಾರರನ್ನು ಚುನಾವಣಾ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಫಾರಂ 9 ಅನ್ನು ಅನಧಿಕೃತವಾಗಿ ಬಳಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಶಕ್ತಿ ಗ್ಯಾರಂಟಿ ಎಫೆಕ್ಟ್ – ಸೀಟಿಗಾಗಿ ವಿದ್ಯಾರ್ಥಿ, ಕಂಡಕ್ಟರ್ ಮಧ್ಯೆ ವಾಕ್ಸಮರ, ಹಲ್ಲೆ ಆರೋಪ
ಝೆನ್ ಜಿ ಯುವಜನತೆಯನ್ನು ಗುರಿಯಾಗಿಸಿಕೊಂಡು ರೂಪಾಂತರ ಗೊಳಿಸಿದ್ದಾರೆ. ದೇಶದಲ್ಲಿ 13 ಕೋಟಿ ಮತದಾರರನ್ನು ಪಟ್ಟಿಯಿಂದ ಡಿಲೀಟ್ ಮಾಡಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

