ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri), ಐಪಿಎಸ್ ಅಧಿಕಾರಿ ಡಿ. ರೂಪಾ (D Roopa) ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಪತಿ ಸುಧೀರ್ ರೆಡ್ಡಿ (Sudhir Reddy) ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್‌ಗೆ (ACMM Court) ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು. ಇದನ್ನೂ ಓದಿ: ರಾಜ್ಯ ಭ್ರಷ್ಟಾಚಾರದ ರಾಜಧಾನಿಯಾಗಿರೋ ಬಗ್ಗೆ ಮೋದಿ ಏಕೆ ಮಾತಾಡ್ತಿಲ್ಲ?: ಡಿಕೆಶಿ
Advertisement
Advertisement
`ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದ್ರೆ ಪರವಾಗಿಲ್ಲ, ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಯಡಿಯೂರಪ್ಪರಿಗೆ ಕಣ್ಣೀರು ಹಾಕಿಸಿದ ಬಗ್ಗೆ ಮೋದಿ ಉತ್ತರ ಕೊಡಲಿ- ಡಿಕೆಶಿ
Advertisement
ಚಾಮರಾಜನಗರದ ಅಮ್ಲಜನಕ ಸಿಲಿಂಡರ್ ದುರಂತ ಪ್ರಕರಣದಲ್ಲಿ ಈಗಾಗಲೇ ಸರ್ಕಾರ ತನಿಖೆ ನಡೆಸಿದೆ. ಸರ್ಕಾರ ವರದಿ ನೀಡಿದ್ದರೂ ಉದ್ದೇಶ ಪೂರ್ವಕವಾಗಿ ಅವಮಾನ ಮಾಡುತ್ತಿದ್ದಾರೆ ಎಂದು ಜಡ್ಜ್ ಗಮನಕ್ಕೆ ತಂದರು.
Advertisement
ರೋಹಿಣಿ ಹೇಳಿಕೆ ಆಧರಿಸಿ, ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಕೋರ್ಟ್ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿದೆ.