ಕಾರವಾರ: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ ಮಾಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯ (Dandeli) ಕಾಳಿ ನದಿ (Kali River) ಪ್ರದೇಶದಲ್ಲಿ ನಡೆದಿದೆ.
ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ ಲಲ್ಲೂಜಿ ಮಣ್ಣವಡ್ಡರ (42) ಮೊಸಳೆಯ ದಾಳಿಗೊಳಗಾದ ವ್ಯಕ್ತಿ. ಆನಂದ ಅಲ್ಲೇ ಹತ್ತಿರದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆಂದು ಹೋಗಿದ್ದರು. ಆದರೆ ಸಾರ್ವಜನಿಕ ಶೌಚಾಲಯ ಹದಗೆಟ್ಟಿರುವ ಹಿನ್ನೆಲೆ ನಿತ್ಯ ಕರ್ಮಕ್ಕಾಗಿ ಕಾಳಿ ನದಿಗೆ ಇಳಿದಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಮೊಸಳೆ ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ ದಾಳಿಯಿಂದ ಗಾಯಗೊಂಡ ಆನಂದ ಕಿರುಚಾಡುವುದನ್ನು ಕೇಳಿದಾಗ ಸ್ಥಳೀಯರು ಮೊಸಳೆಯನ್ನು ಓಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಗ್ಯಾಲಕ್ಸ್ ಐ ಅಭಿವೃದ್ಧಿ ಪಡಿಸಿದ ವಿಶ್ವದ ಮೊದಲ OptoSAR ಉಪಗ್ರಹ ಉಡಾವಣೆ ಯಶಸ್ವಿ – ಪಾಕಿಸ್ತಾನ, ಚೀನಾಗೆ ತಲೆನೋವು ಯಾಕೆ?
ಕಾಲಿಗೆ ಹಾಗೂ ಇನ್ನಿತರ ಭಾಗಗಳಿಗೆ ಗಾಯಗೊಂಡ ಆನಂದ ಲಲ್ಲೂಜಿ ಮಣ್ಣವಡ್ಡರ ಅವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಸಿಪಿಐ ಶಿವಾನಂದ ಅಂಬಿಗೇರ, ಪಿಎಸ್‌ಐ ಅಮೀನ್ ಅತ್ತಾರ ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: IPL 2026 | ವೈಭವ್ ಅಬ್ಬರಕ್ಕೆ ಹೆದರಿದ್ದೆ – ಕೈಲ್ ಜೇಮಿಸನ್

