ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಕಾಲುವೆಯಲ್ಲಿ ಬೃಹತ್ ಮೊಸಳೆ ಪತ್ತೆಯಾಗಿದ್ದು, ಗ್ರಾಮಸ್ಥರು ಭಯಬೀತರಾಗಿದ್ದಾರೆ.
ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿಯ ಬೇನಾಳ ಗ್ರಾಮದ ಸೇತುವೆ ಬಳಿ ಕಾಲುವೆ ಇದೆ. ಅಲ್ಲಿ ಬೃಹತ್ ಮೊಸಳೆ ಕಂಡು ಬಂದಿದೆ. ಇದರಿಂದ ಗ್ರಾಮಸ್ಥರು ಭಯಗೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
Advertisement
ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆ ರಕ್ಷಣಾ ಕಾರ್ಯವನ್ನು ಮಾಡಿದ್ದರು. ಸ್ಥಳೀಯರು ಹಾಗೂ ಮೀನುಗಾರರ ಸಹಾಯದಿಂದ ಬಲೆ ಹಾಕಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಮೊಸಳೆಗೆ ಬಲೆ ಹಾಕಿದರೂ ಸಹ ಅದು ಜನರ ಮೇಲೆ ಅಟ್ಯಾಕ್ ಮಾಡಲು ಯತ್ನಿಸಿತ್ತು. ಈ ಎಲ್ಲಾ ದೃಶ್ಯಗಳನ್ನು ಸ್ಥಳದಲ್ಲಿದ್ದವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
Advertisement
ಸದ್ಯಕ್ಕೆ ಸೆರೆ ಹಿಡಿದ ಮೊಸಳೆಯನ್ನು ಅರಣ್ಯಾಧಿಕಾರಿಗಳು ಆಲಮಟ್ಟಿ ಜಲಾಶಯದಲ್ಲಿ ಬಿಟ್ಟಿದ್ದಾರೆ. ಕಾಲುವೆಯಲ್ಲಿ ನೀರು ಇಲ್ಲದಿದ್ದರೂ ಮೊಸಳೆ ಹೇಗೆ ಬಂತು ಎಂದು ಜನರಲ್ಲಿ ಆತಂಕ ಮೂಡಿದೆ.
Advertisement