ಲಕ್ನೋ: ಸರ್ಕಾರಿ ಶಾಲೆಯ ಆವರಣದಲ್ಲಿ ಮೊಸಳೆ (Crocodile) ಕಾಣಿಸಿಕೊಂಡು, ವಿದ್ಯಾರ್ಥಿಗಳು (Student) ಆತಂಕ ಉಂಟಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಖಾಸಿಂಪುರ ಗ್ರಾಮದ ಶಾಲೆಯಲ್ಲಿ (School) ಈ ಘಟನೆ ನಡೆದಿದೆ. ಮೊಸಳೆಯನ್ನು ಕಂಡ ನಂತರ ಮಕ್ಕಳು ಹಾಗೂ ಸಿಬ್ಬಂದಿ ಎಚ್ಚೆತ್ತಿದ್ದಾರೆ. ಇದರಿಂದಾಗಿ ಗ್ರಾಮಸ್ಥರಿಗೆ ಹಾಗೂ ಅಧಿಕಾರಿಗೆ ತಿಳಿಸಿದ್ದಾರೆ. ಕೂಡಲೇ ಗ್ರಾಮಸ್ಥರು ಧಾವಿಸಿ ಮೊಸಳೆಯನ್ನು ಹಿಡಿದು ತರಗತಿಯಲ್ಲಿ (ClassRoom) ಕೂಡಿ ಹಾಕಿ ಬೀಗ ಹಾಕಿದರು. ಇದನ್ನೂ ಓದಿ: ಶಶಿ ತರೂರ್‌ಗೆ ಕೇರಳದಲ್ಲೇ ಸಿಕ್ತಿಲ್ಲ ಬೆಂಬಲ – ರಾಹುಲ್ ಸ್ಪರ್ಧಿಸುವಂತೆ ಒತ್ತಾಯ
ನಂತರ ಜಿಲ್ಲಾ ಅಧಿಕಾರಿಗಳು ಮತ್ತು ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಅದಾದ ಬಳಿಕ ಶಾಲೆಯಲ್ಲಿದ್ದ ಮೊಸಳೆಯನ್ನು ಗಂಗಾ ನದಿಗೆ ಬಿಡಲಾಯಿತು. ಗ್ರಾಮದ ಕೆರೆಯಲ್ಲಿ ಹಲವಾರು ಮೊಸಳೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಲವು ಬಾರಿ ಸ್ಥಳೀಯ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ಶಾಲೆಯ ಸಿಬ್ಬಂದಿ ಕಿಡಿಕಾರಿದರು. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ