ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ (Karnataka BJP) ಆಂತರಿಕ ಅಸಮಾಧಾನ ಮತ್ತು ಅಡ್ಡಮತದಾನದ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ದೇವಸ್ಥಾನಕ್ಕೆ(Dharmasthala Temple) ಭೇಟಿ ನೀಡಲಿದ್ದಾರೆ.
ಇಂದು ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ವಿಜಯೇಂದ್ರ(BY Vijayendra) ಬಳಿಕ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
ರಾಜ್ಯಸಭಾ ಅಥವಾ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ (Cross Vote) ಸತ್ಯಾಸತ್ಯತೆ ತಿಳಿಯಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ (BJP CLP) ಸಭೆ ನಡೆಸಿ, ಶಾಸಕರಿಂದ ಆಣೆ-ಪ್ರಮಾಣ ಮಾಡಿಸಲು ಮೊದಲು ಯೋಜಿಸಲಾಗಿತ್ತು. ಆದರೆ, ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಇಂತಹ ರಾಜಕೀಯ ಸಭೆ ಹಾಗೂ ಆಣೆ-ಪ್ರಮಾಣದ ರಾಜಕಾರಣ ಮಾಡುವುದಕ್ಕೆ ಪಕ್ಷದ ಒಳಗಡೆಯೇ ಹಿರಿಯ ನಾಯಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದನ್ನೂ ಓದಿ: ಬಿಜೆಪಿಯಿಂದ ಅಡ್ಡ ಮತದಾನ – ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಗರಂ
ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಅವರು ಇಂದು ರಾತ್ರಿಯೇ ನೇರವಾಗಿ ಧರ್ಮಸ್ಥಳಕ್ಕೆ ಬರಲಿದ್ದಾರೆ. ನಾಳೆ ಬೆಳಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
