ಕಾರವಾರ: ಕಾಗೆ ಎಂದರೆ ಸಾಕು ಎಲ್ಲರೂ ಅದನ್ನು ಓಡಿಸುತ್ತಾರೆ. ಕಾಗೆ ಮನೆಯಲ್ಲಿ ಕೂಗಿದರೆ ಸಾವು ಸಂಭವಿಸುತ್ತದೆ, ನೆಂಟರು ಬರುತ್ತಾರೆ ಎಂದೆಲ್ಲಾ ನಂಬಿಕೆ ಇಂದಿಗೂ ನಮ್ಮ ಗ್ರಾಮಗಳಲ್ಲಿವೆ. ಮಹಾಲಯ ಅಮವ್ಯಾಸೆ ದಿನ ಪೂರ್ವಜರನ್ನು ಸ್ಮರಿಸಿ ಕಾಗೆಗೆ ಎಡೆ ನೀಡುವ ಸಂಪ್ರದಾಯ ಸಹ ಇದೆ. ಆದರೆ ಇಲ್ಲೊಂದು ಕಥೆ ವಿಭಿನ್ನವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ನಗರದ ಮಾಧವನಗರದ ನಿವೃತ್ತ ಸರ್ಕಾರಿ ನೌಕರ ವಿಠಲ್ ಶಟ್ಟಿ ಅವರು, ಕಳೆದ ಹತ್ತು ವರ್ಷದಿಂದ ಕಾಗೆಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾರೆ. ಇದೀಗ ಈ ಕಾಗೆ ಮನೆಯ ಸದಸ್ಯನಂತಾಗಿದ್ದು, ಪ್ರತಿ ದಿನ ಇವರ ಮನೆಯಲ್ಲಿ ಆಹಾರ ಸೇವಿಸಲು ಬರುತ್ತಿದೆ. ಇದನ್ನೂ ಓದಿ: ರಾಷ್ಟ್ರೀಯತೆಯ ಚಿಂತನೆಯನ್ನು ಬೆಳೆಸಿಕೊಂಡರೆ ಎಚ್‍ಡಿಕೆಗೆ ಹೊಟ್ಟೆ ಉರಿ ಯಾಕೆ: ಸೂಲಿಬೆಲೆ ಪ್ರಶ್ನೆ
Advertisement
Advertisement
ಬಾಂಧವ್ಯ ಬೆಳೆದಿದ್ದು ಹೇಗೆ?
ಕಳೆದ ಹತ್ತು ವರ್ಷದ ಹಿಂದೆ ಒಂದು ಕಾಲು ತುಂಡಾದ ಕಾಗೆ ತನ್ನ ಮರಿಗಳೊಂದಿಗೆ ಇವರ ಮನೆಯ ಬಳಿ ಹಾರಾಡುತಿತ್ತು. ಈವೇಳೆ ಅದರೊಂದಿಗಿದ್ದ ಮರಿ ಕಾಗೆ ಅಸ್ವಸ್ಥವಾಗಿ ಇವರ ಮನೆಯ ಬಳಿ ಕುಳಿತಿದೆ. ಇದನ್ನು ಗಮನಿಸಿದ ಅವರು ಕಾಗೆಗೆ ಉಪಚರಿಸಿದ್ದಾರೆ. ಉಪಚಾರದಿಂದ ಚೇತರಿಸಿಕೊಂಡಿದ್ದ ಕಾಗೆ ಮರಿ ಪ್ರತಿ ದಿನ ಇವರ ಮನೆಗೆ ಬರುತಿತ್ತು. ಹೀಗಾಗಿ ಮನೆಯಲ್ಲಿ ಇವರು ತಾವು ತಿನ್ನುವ ರೊಟ್ಟಿ ,ಅನ್ನವನ್ನು ನೀಡುತಿದ್ದರು. ಹೀಗೆ ಕಾಗೆಯೊಂದಿಗೆ ಸ್ನೇಹ ಬೆಳೆಸಿಕೊಂಡ ಅವರು ಪ್ರತಿ ದಿನ ಮನೆಯ ಜನರೊಂದಿಗೆ ಇದಕ್ಕೂ ಸಹ ಉಪಹಾರ ನೀಡುವುದನ್ನು ಬೆಳಸಿಕೊಂಡಿದ್ದು, ಇದೀಗ ಗೆಳೆತನ ಆಪ್ತವಾಗಿದೆ. ಸಲುಗೆಯಲ್ಲಿ ಇವರ ಕೈಮೇಲೆ ಕುಳಿತು ಆಹಾರ ಸೇವಿಸಿ ತೆರಳುತ್ತದೆ. ಇದನ್ನೂ ಓದಿ: RSS ನ 4 ಸಾವಿರ ಐಎಎಸ್, ಐಪಿಎಸ್ ಅಧಿಕಾರಿಗಳಿದ್ದಾರೆ- ಬಿಜೆಪಿ ವಿರುದ್ಧ ಎಚ್‍ಡಿಕೆ ವಾಗ್ದಾಳಿ
Advertisement
Advertisement
ಮನುಷ್ಯ ಹಾಗೂ ಪ್ರಾಣಿ-ಪಕ್ಷಿಗಳು ಈ ಜೀವ ಸಂಕುಲಗಳ ಸರಪಳಿ, ಅವುಗಳನ್ನು ಪ್ರೀತಿಯಿಂದ ನೋಡಿಕೊಂಡರೆ, ಪ್ರೀತಿ ಸಂಪಾದಿಸುವುದು ಸುಲಭವಾಗಿದೆ. ಈ ಕಾಗೆಯನ್ನು ಒಂದು ದಿನ ನೋಡದಿದ್ದರೂ ಮನಸ್ಸು ಪರಿತಪ್ಪಿಸುತ್ತದೆ. ಇದರೊಂದಿಗೆ ಬೆರೆತ ಬಾಂಧವ್ಯ ಅಂತದ್ದು ಎಂದು ವಿಠಲ್ ಶಟ್ಟಿಯವರು ವಿವರಿಸುವಾಗ ಅವರ ಪ್ರೀತಿ ಎದ್ದು ಕಾಣುತ್ತದೆ. ಬಾಂಧವ್ಯಗಳನ್ನೇ ಮರೆತಿರುವ ಇಂದಿನ ದಿನಗಳಲ್ಲಿ ಇವರ ಈ ಪ್ರೀತಿ ಮಾದರಿಯಾಗಿದೆ. ಇದನ್ನೂ ಓದಿ: ಸಂಜನಾ ಕ್ಯಾಬ್ ಕಿರಿಕ್- ಸ್ಪಷ್ಟನೆ ಕೊಟ್ಟ ನಟಿ