ಬಳ್ಳಾರಿ: ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್‌ರನ್ನು(Darshan) ಶಿಫ್ಟ್ ಮಾಡಲಾಗಿದ್ದು, ಈ ವೇಳೆ, ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ದರ್ಶನ್ ನೋಡಲು ಫ್ಯಾನ್ಸ್ (Fans) ಮುಗಿಬಿದ್ದಿದ್ದಾರೆ. ಇದನ್ನೂ ಓದಿ:ಕೋಲ್ಡ್ ಬ್ಲಡೆಡ್ ಕೊಲೆ ಕೇಸ್‌ನಲ್ಲಿ ಪವಿತ್ರಾ ಭಾಗಿ – ಮಹಿಳೆಯರಿಗೇಕೆ ವಿಶೇಷ ಅವಕಾಶ ಕೊಡಬೇಕು?; ಎಸ್‌ಪಿಪಿ ವಾದ
ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗ್ತಿದ್ದಂತೆ ನಟನ ಪರ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ರಾಜ ಎಲ್ಲಿದ್ದರೂ ರಾಜನೇ ಎಂದು ಘೋಷಣೆ ಕೂಗಿದ್ದಾರೆ. ದರ್ಶನ್ ಆದಷ್ಟು ಬೇಗ ಬಿಡುಗಡೆ ಆಗಲಿ ಅಂತ ನಾಳೆ (ಆ.30) ದುರ್ಗಮ್ಮ ದೇವಿಗೆ ಪೂಜೆ ಮಾಡಿಸುತ್ತೇವೆ ಎಂದು ಅಲ್ಲಿ ಸೇರಿದ್ದ ಅಭಿಮಾನಿಗಳು ಹೇಳಿದ್ದಾರೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಿತ್ತು. ಈ ಆದೇಶದ ನಂತರ ದರ್ಶನ್ ಅವರನ್ನು ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್ ವ್ಯಾನ್‌ನಲ್ಲಿ ಬಳ್ಳಾರಿ ಜೈಲಿಗೆ ಕರೆ ತರಲಾಗಿದೆ.