ಚಂಢೀಗಡ: ಸಹೋದ್ಯೋಗಿ ಗುಂಡಿನ ದಾಳಿಗೆ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.
Advertisement
ರಾಜ್ಯ ರಾಜಧಾನಿ ರಾಯ್ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸುಕ್ಮಾ ಜಿಲ್ಲೆಯ ಮರೈಗುಡೆಮ್ನಲ್ಲಿರುವ ಲಿಂಗಂಪಲ್ಲಿಯ 50ನೇ ಬೆಟಾಲಿಯನ್ನ ಶಿಬಿರದಲ್ಲಿ ಸಿಆರ್ಪಿಎಫ್ ಯೋಧರ ನಡುವೆ ಘರ್ಷಣೆ ನಡೆದಿದ್ದು, ಈ ಘಟನೆ ಮುಂಜಾನೆ 3.30ರ ಸುಮಾರಿಗೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ಶ್ರೇಣಿ) ಸುಂದರರಾಜ್ ಪಿ. ಹೇಳಿದ್ದಾರೆ. ಇದನ್ನೂ ಓದಿ: ಸ್ವಿಗ್ಗಿ ಊಟ ತಂದು ಕೊಡದಕ್ಕೆ ಪಿಎಂ, ಸಿಎಂಗೆ ಪತ್ರ ಬರೆದ ಸಿನಿಮಾ ಸೂಪರ್ ಸ್ಟಾರ್
Advertisement
The jawans injured in the incident of fratricide at CRPF 50 Bn Lingalapalli camp under Maraiguda Police station limits (in Sukma district of Chhattisgarh) were rushed to the nearest hospital – Area Hospital Bhadrachalem (in Telangana) for treatment.
— ANI (@ANI) November 8, 2021
Advertisement
ಯೋಧನೊಬ್ಬ ತನ್ನ ಸಹ ಸೈನಿಕರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಹೀಗಾಗಿ ಕೂಡಲೇ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಕ್ಕಿ, ಕತ್ರಿನಾ ಮದುವೆ ಸಿದ್ಧತೆ ಶುರು
Advertisement