ಲಂಡನ್/ನವದೆಹಲಿ: ಸೌದಿ ಅರೇಬಿಯಾ ಸೇರಿದಂತೆ ತೈಲ ಉತ್ಪಾದನೆ ಮಾಡುವ ಒಪೆಕ್(OPEC) ದೇಶಗಳು ಕಚ್ಚಾ ತೈಲ (Crude Oil) ಉತ್ಪಾದನೆಯನ್ನು ಕಡಿಮೆ ಮಾಡುವ ಶಾಕಿಂಗ್ ನಿರ್ಧಾರ ಘೋಷಣೆ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ದರ ಭಾರೀ ಏರಿಕೆಯಾಗಿದೆ.
ಸೋಮವಾರ ಒಂದು ಬ್ಯಾರೆಲ್ ಕಚ್ಚಾ ಬ್ರೆಂಟ್ ಕಚ್ಚಾ ತೈಲ ದರ ಶೇ.5 ರಷ್ಟು ಏರಿಕೆಯಾಗಿದ್ದು ಈಗ 84 ಡಾಲರ್ಗೆ (ಅಂದಾಜು 6,900 ರೂ.) ಏರಿಕೆಯಾಗಿದೆ. 2023ರ ಕೊನೆಗೆ ಇದು 90-95 ಡಾಲರ್ಗೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.
Advertisement
Advertisement
ಭಾನುವಾರ ಒಪೆಕ್ ದೇಶಗಳು 1.16 ದಶಲಕ್ಷ ಬ್ಯಾರೆಲ್ ಪರ್ ಡೇ(bpd) ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವು ಶಾಕಿಂಗ್ ನಿರ್ಧಾರವನ್ನು ಪ್ರಕಟಿಸಿದ್ದವು.
Advertisement
ಕೋವಿಡ್ ಆರಂಭದಲ್ಲಿ ಭಾರೀ ಇಳಿಕೆ ಕಂಡಿದ್ದ ಕಚ್ಚಾ ತೈಲದ ಬೆಲೆಗಳು ರಷ್ಯಾ-ಉಕ್ರೇನ್ (Russia-Ukraine) ಯುದ್ಧ ಆರಂಭದಲ್ಲಿ ಸಮಯದಲ್ಲಿ ಪ್ರತಿ ಬ್ಯಾರೆಲ್ ದರ 130 ಡಾಲರ್ಗೆ ಏರಿಕೆಯಾಗಿತ್ತು. ನಂತರ ಸ್ವಲ್ಪ ಇಳಿಕೆಯಾಗಿತ್ತು. ಕಳೆದ ತಿಂಗಳು ಪ್ರತಿ ಬ್ಯಾರೆಲ್ ಕಚ್ಚಾ ತೈದ ದರ 70 ಡಾಲರ್ಗೆ ಇಳಿಕೆಯಾದ ಬೆನ್ನಲ್ಲೇ ಮಾರುಕಟ್ಟೆಯ ದರದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಒಪೆಕ್ ರಾಷ್ಟ್ರಗಳು ತೈಲ ಉತ್ಪಾದನೆಯನ್ನು ಕಡಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಕ್ರಿಕೆಟ್ ಪಂದ್ಯದಲ್ಲಿ ʼನೋಬಾಲ್ʼ ನೀಡಿದ್ದಕ್ಕೆ ಅಂಪೈರ್ನನ್ನೇ ಇರಿದು ಕೊಂದ ಆಟಗಾರ
Advertisement
ಕಡಿತ ಯಾವಾಗದಿಂದ?
ಮೇ ತಿಂಗಳಿನಿಂದ ಆರಂಭವಾಗಿ ಈ ವರ್ಷದ ಕೊನೆಯವರೆಗೂ ಕಡಿತ ಮುಂದುವರಿಯಲಿದೆ. ಸೌದಿ ಅರೇಬಿಯಾ 5 ಲಕ್ಷ ಬಿಪಿಡಿ, ಇರಾಕ್ 2 ಲಕ್ಷ ಬಿಪಿಡಿ ಕಚ್ಚಾ ತೈಲ ಉತ್ಪಾದನೆ ಕಡಿತ ಮಾಡಲಿದೆ. ರಷ್ಯಾ ಈಗಾಗಲೇ 5 ಲಕ್ಷ ಬಿಪಿಡಿ ತೈಲ ಉತ್ಪಾದನೆ ಕಡಿತ ಮಾಡುವುದಾಗಿ ತಿಳಿಸಿದೆ.
ಭಾರತದ ಮೇಲೆ ಪರಿಣಾಮ ಏನು?
ಭಾರತ ಶೇ.85 ರಷ್ಟು ತೈಲವನ್ನು ಆಮದು ಮಾಡುತ್ತಿದೆ. ಹಣದುಬ್ಬರವನ್ನು (Inflation) ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಭಾರತದ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಇತ್ಯಾದಿಗಳ ಬೆಲೆಯನ್ನು ಏರಿಕೆ ಮಾಡದ ಪರಿಣಾಮ ತೈಲ ಕಂಪನಿಗಳು ನಷ್ಟವನ್ನು ಅನುಭವಿಸುತ್ತಿದೆ. ದರವನ್ನು ಪರಿಷ್ಕರಣೆ ಮಾಡದೇ ಇದ್ದರೆ ಕಂಪನಿಗಳ ನಷ್ಟ ಮತ್ತಷ್ಟು ಹೆಚ್ಚಾಗಲಿದೆ. ತೈಲ ದರ ಏರಿಕೆ ಮಾಡಿದರೆ ಇತ್ತ ಜನ ಸಾಮಾನ್ಯರ ಮೇಲೆ ಹೊರೆ ಬೀಳಲಿದೆ. ಇದನ್ನೂ ಓದಿ: ನಷ್ಟ ಸರಿದೂಗಿಸಲು ತೈಲ ಕಂಪನಿಗಳಿಗೆ 22 ಸಾವಿರ ಕೋಟಿ ರೂ. ಅನುದಾನ