ಲಂಡನ್: ಯುರೋಪಿಯನ್ ಒಕ್ಕೂಟ(ಇಯು) ಈ ವರ್ಷದ ಅಂತ್ಯದ ವೇಳೆಗೆ ರಷ್ಯಾದಿಂದ ಆಮದಾಗುವ ತೈಲವನ್ನು ಶೇ.90 ರಷ್ಟು ಕಡಿತಗೊಳಿಸಲು ಒಪ್ಪಿಕೊಂಡಿದೆ. ಇಯು ನಿರ್ಧಾರದ ಬೆನ್ನಲ್ಲೇ ಮಂಗಳವಾರ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.
ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಈ ಬಗ್ಗೆ ತಮ್ಮ ಟ್ವಿಟ್ಟರ್‌ನಲ್ಲಿ, ರಷ್ಯಾದಿಂದ ಆಮದಾಗುವ ತೈಲದ ನಿರ್ಬಂಧದ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಇದು ಈ ವರ್ಷದ ಅಂತ್ಯದ ವೇಳೆ ರಷ್ಯಾದಿಂದ ಸುಮಾರು ಶೇ.90 ರಷ್ಟು ಆಮದನ್ನು ಕಡಿತಗೊಳಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ಬಂಧನ ರಾಜಕೀಯ ಪ್ರೇರಿತ, ನಮ್ಮದು ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್
Advertisement
Advertisement
ಈ ನಿರ್ಧಾರದಿಂದ ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪರಿಣಾಮ ಬೀರಲಿದೆ. ಆದರೆ ಹಂಗೇರಿ, ಸ್ಲೋವಾಕಿಯಾ ಹಾಗೂ ಜೆಕ್ ರಿಪಬ್ಲಿಕ್‌ಗಳಲ್ಲಿ ರಷ್ಯಾದ ಆಮದನ್ನು ಕಡಿತಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದೆ. ಇದಕ್ಕಾಗಿ ಸದ್ಯ ಪೈಪ್‌ಲೈನ್ ಮುಖಾಂತರ ರಷ್ಯಾದಿಂದ ಬರುವ ತೈಲಕ್ಕೆ ತಾತ್ಕಾಲಿಕ ವಿನಾಯಿತಿ ಇರಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: 130 ಕೋಟಿ ಜನರಿಗೆ ನಾನು ಸೇವಕನಷ್ಟೇ: ನರೇಂದ್ರ ಮೋದಿ
Advertisement
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ಗೆ 117.93 ಡಾಲರ್(9,162 ರೂ.) ಇದ್ದ ಕಚ್ಚಾ ತೈಲದ ಬೆಲೆ ಈಗ 122 ಡಾಲರ್‌ಗೆ(9,478 ರೂ.) ಏರಿಕೆಯಾಗಿದೆ.
Advertisement
ಜಾಗತಿಕವಾಗಿ ತೈಲಬೆಲೆ ಹೆಚ್ಚಾಗಿದ್ದರೂ ಭಾರತದಲ್ಲಿ ಕಳೆದ 9 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್‌ನ ಬೆಲೆ ತಟಸ್ಥವಾಗಿದೆ. ಮೇ 22 ರಂದು ಕೆಂದ್ರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಪೆಟ್ರೋಲ್‌ಗೆ 8 ರೂ. ಹಾಗೂ ಲೀಟರ್ ಡೀಸೆಲ್‌ಗೆ 6 ರೂ. ಕಡಿತಗೊಳಿಸಿದೆ.