ಧಾರವಾಡ: ರಾಜ್ಯದಲ್ಲಿ ಒಂದು ಕಡೆ ಮಳೆಯ ಅಬ್ಬರದಿಂದಾಗಿ ಅನಾಹುತಗಳು ಸಂಭವಿಸುತ್ತಿದ್ದರೆ ಇನ್ನೊಂದು ಕಡೆ ಇವತ್ತು ಎರಡು ಭೀಕರ ಅಪಘಾತಗಳು ಸಂಭವಿಸಿದೆ.
ಧಾರವಾಡದ ಬಾಡಾ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಮೂವರು ಮಕ್ಕಳು ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ಎಚ್ಚರಿಕೆ – ಅಂತರಾಷ್ಟ್ರೀಯ ಪ್ರವೇಶ ಕೇಂದ್ರಗಳಲ್ಲಿ ಕಣ್ಗಾವಲು
Advertisement
Advertisement
ಇಂದು ನಡೆಯಬೇಕಿದ್ದ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ (11), ಅನನ್ಯ (14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸೆಕ್ಸ್ನಿಂದಲೂ ಹರಡಬಹುದು ಮಂಕಿಪಾಕ್ಸ್- ತಜ್ಞರಿಂದ ಎಚ್ಚರಿಕೆ
Advertisement
ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬೆನ್ನಲ್ಲೇ ಕ್ರೂಸರ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.