ರಾಯಚೂರು: ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.
ಕೊಪ್ಪಳದ ಗಿಣಿಗೇರಾ ಮೂಲದ ಲಕ್ಷ್ಮೀದೇವಿ (45) ಮೃತ ಮಹಿಳೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನ ಕ್ರೂಸರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕ್ರೂಸರ್ ಟೈರ್ ಬ್ಲಾಸ್ಟ್ ಆಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇದನ್ನೂ ಓದಿ: ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣನೇ?- ಲಂಕಾ ಅಧ್ಯಯನ
ವಾಹನ ಪಲ್ಟಿ ಹೊಡೆದು ಉಲ್ಟಾ ಬಿದ್ದಿದ್ದರಿಂದ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್