ಚಿಕ್ಕೋಡಿ: ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ (Cruiser) ವಾಹನ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ನಡೆದಿದೆ.
ಮೃತ ಮಹಿಳೆಯರನ್ನು ಬೆಳಗಾವಿ ಜಿಲ್ಲೆಯ ಅಥಣಿಯ ಬಳ್ಳಿಗೇರಿ ಗ್ರಾಮದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯರು ಬಳ್ಳಿಗೇರಿಯಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಮನೆಯಲ್ಲಿ ಕೈ, ಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಮೃತದೇಹ ಪತ್ತೆ
ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ-ಸ್ಕ್ಯಾನಿಂಗ್ ಸೆಂಟರ್ ಸೀಜ್