ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ನಾಲೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತವಾಗಿದೆ. ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22) ಹಾಗೂ ದಾಸನಟ್ಟಿ ಗ್ರಾಮದ ಫಕಿರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಗೋಕಾಕ್ ತಾಲೂಕಿನ ದಾಸನಟ್ಟಿ, ಅಕ್ಕತಂಗೇರಹಾಳ, ಎಂ ಮಲ್ಲಾಪುರ ನಿವಾಸಿಗಳಾಗಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆಂದು ಹೊರಟಿದ್ದರು. ಆದರೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದಾರೆ.
Advertisement
Advertisement
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತುಪರಿಸ್ಥಿತಿಯಲ್ಲ, ಆದರೆ ಹರಡುವ ಭೀತಿಯಿದೆ: WHO
Advertisement
ಜಿಲ್ಲೆಯ ಗೋಕಾಕ ತಾಲೂಕಿನ ಅಕ್ಕತಂಗೆರಹಾಳ ಗ್ರಾಮದಿಂದ ಮೂರು ಕ್ರೂಸ್‌ಗಳಲ್ಲಿ ಕಾರ್ಮಿಕ ಬೆಳಗಾವಿಯ ಸಮೀಪದಲ್ಲಿ ನಡೆಯುತ್ತಿರುವ ರೈಲ್ವೆ (ಡಬ್ಲಿಂಗ್) ಟ್ರಾಕ್ ಕಾಮಗಾರಿಗೆ ಹೊರಟಿದ್ದರು. ಒಂದು ಕ್ರೂಸ್‌ನಲ್ಲಿ 18 ಜನರು ಪ್ರಾಯಣಿಸುತ್ತಿದ್ದರು. ಗೋಕಾಕ್ ಮಾರ್ಗದಿಂದ ಅತಿವೇಗವಾಗಿ ಹೋಗುವಾಗ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಲ್ಯಾಳ ರಸ್ತೆ ಬದಿಯ ಬ್ರಿಡ್ಜ್ ( ಪೂಲ್ )ಗೆ ಡಿಕ್ಕಿ ಹೊಡೆದು ಎರಡು ಬಾರಿ ಪಲ್ಟಿ ಹೊಡೆದು ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಜನರ ಸಾವಾಗಿದೆ. ಬೆಳಿಗ್ಗೆ 9.20ರ ಸುಮಾರಿಗೆ ಈ ಅಪಘಾತವಾಗಿದೆ. ಮೃತರೆಲ್ಲರೂ ಗೋಕಾಕ ತಾಲೂಕಿನ ಅಕ್ಕತಂಗೆರಹಾಳ ಮತ್ತು ದಾಸನಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇನ್ನೂ ಅಪಘಾತವಾದ ಪರಿಣಾಮ ಕ್ರೂಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.