ಮೈಸೂರು: ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ನಾಳೆಯೇ ಬಿಜೆಪಿ ಸೇರಿಕೊಳ್ಳುತ್ತಾರೆ ಎಂದು ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು (C.S Puttaraju) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ (Narendra Modi) ಕಾರ್ಯಕ್ರಮದಲ್ಲೇ ಸೇರ್ಪಡೆ ಆಗೋ ಪ್ಲಾನ್ ಮಾಡಿದ್ರು. ಆದರೆ ಸರ್ಕಾರಿ ಕಾರ್ಯಕ್ರಮ ಆಗಿದ್ರಿಂದ ಅವಕಾಶ ಸಿಗಲಿಲ್ಲ. ಹೀಗಾಗಿ ನನ್ನ ಪ್ರಕಾರ ಅವರು ನಾಳೆ ಬಿಜೆಪಿ (Sumalatha BJP) ಸೇರಬಹುದು ಎಂದಿದ್ದಾರೆ.
ಇದೇ ವೇಳೆ ದಶಪಥ ರಸ್ತೆ ಕ್ರೆಡಿಟ್ ವಾರ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜೆಡಿಎಸ್‍ನದ್ದು ಪಾಲಿದೆ ಎಂದು ಕ್ರೆಡಿಟ್ ಕ್ಲೈಮ್ ಮಾಡಿದರು. ಪ್ರತಾಪ್ ಸಿಂಹ (Pratap Simha) ಹೆಜ್ಜೆ ಹೆಜ್ಜೆಗೂ ಚೀಫ್ ಎಂಜಿನಿಯರ್ ಥರ ಆಡ್ತಿದ್ದಾರೆ. ಕೇಂದ್ರ ಸರ್ಕಾರ ಪ್ರತಾಪ್ ಸಿಂಹಗೆ ಹೆದ್ದಾರಿ ಯೋಜನೆ ಗುತ್ತಿಗೆ ಕೊಟ್ಟಿದ್ಯಾ? ಇಡೀ ಯೋಜನೆ ನಾನೊಬ್ಬನೇ ಮಾಡಿಸಿದ್ದೇನೆ ಅಂತ ಓಡಾಡಿಕೊಂಡಿದ್ದಾರೆ. ನಾನು ಎಂಪಿ ಆಗಿದ್ದವನು. ದೆಹಲಿಯಲ್ಲಿ ಏನೆಲ್ಲಾ ಹೋರಾಟ ಮಾಡಿದ್ದೀನಿ ಅಂತ ಯಡಿಯೂರಪ್ಪ (BS Yediyurappa) ಅವರ ಬಳಿ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದರು.
ಮೈತ್ರಿ ಸರ್ಕಾರ ಇದ್ದಾಗ ಕುಮಾರಸ್ವಾಮಿ ಯೋಜನೆಯ ಅಲೈನ್‍ಮೆಂಟ್ ಮಾಡಿ, ಅನುಮೋದನೆ ನೀಡದಿದ್ದರೆ ಹೆದ್ದಾರಿ ಹೇಗೆ ಆಗುತ್ತಿತ್ತು. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದಿದ್ರೂ ಈ ಯೋಜನೆಗೆ ಸಹಕಾರ ಕೊಡಲೇಬೇಕಿತ್ತು. ಹೆದ್ದಾರಿ ಬಂದಿರುವುದರಿಂದ ಚನ್ನಪಟ್ಟಣ, ರಾಮನಗರ, ಮಂಡ್ಯ ಶ್ರೀರಂಗಪಟ್ಟಣದ ನೂರಾರು ಕುಟುಂಬಗಳ ಬಾಯಿಗೆ ಮಣ್ಣು ಬಿದ್ದಿದೆ ಎಂದು ತಿಳಿಸಿದರು.