ದುಬೈ: ಡೆಲ್ಲಿ ವಿರುದ್ಧ 4 ವಿಕೆಟ್‍ಗಳಿಂದ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಫೈನಲ್ ಪ್ರವೇಶಿಸಿದೆ. ಈ ಮೂಲಕ 9 ಬಾರಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದಂತಾಗಿದೆ.
Advertisement
ಡೆಲ್ಲಿ ತಂಡ ನೀಡಿದ 173 ರನ್‍ಗಳ ಗುರಿ ಪಡೆದ ಚೆನ್ನೈ ರಾಬಿನ್ ಉತ್ತಪ್ಪ ಮತ್ತು ಗಾಯಕ್ವಾಡ್ ಬ್ಯಾಟಿಂಗ್ ನೆರವಿನಿಂದ 19.4 ಓವರ್‍ಗಳಲ್ಲಿ 173 ರನ್ ಸಿಡಿಸಿ ರೋಚಕ ಜಯ ದಾಖಲಿಸಿದೆ. ಈ ಮೂಲಕ ಕಳೆದ ಬಾರಿ ಲೀಗ್ ಹಂತದಲ್ಲೇ ಹೊರ ಬಿದ್ದಿದ್ದ ಚೆನ್ನೈ ಈ ಬಾರಿ ಫೈನಲ್ ಪ್ರವೇಶಿಸಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.
Advertisement
Advertisement
ಉತ್ತಪ್ಪ, ಗಾಯಕ್ವಾಡ್ ಬೊಂಬಾಟ್ ಬ್ಯಾಟಿಂಗ್:
173ರನ್‍ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡ ಆರಂಭದಲ್ಲಿ ಫಾಫ್ ಡು ಪ್ಲೆಸಿಸ್ 1ರನ್ ಸಿಡಿಸಿ ಔಟ್ ಆದರು ಬಳಿಕ ಒಂದಾದ ಉತ್ತಪ್ಪ ಮತ್ತು ಗಾಯಕ್ವಾಡ್ 2ನೇ ವಿಕೆಟ್‍ಗೆ 110 ರನ್ (77 ಎಸೆತ) ಜೊತೆಯಾಟವಾಡಿದರು. ಉತ್ತಮವಾಗಿ ಆಡುತ್ತಿದ್ದ ಉತ್ತಪ್ಪ 63 ರನ್ (44 ಎಸೆತ, 7 ಬೌಂಡರಿ, 2 ಸಿಕ್ಸ್) ಬಾರಿಸಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಶ್ರೇಯಸ್ ಅಯ್ಯರ್ ಹಿಡಿದ ಉತ್ತಮವಾದ ಕ್ಯಾಚ್‍ಗೆ ಬಳಿಯಾದರು. ಇದನ್ನೂ ಓದಿ: ಟಿ20 ವಿಶ್ವಕಪ್ ಗೆದ್ದರೆ ಸಿಗುವ ನಗದು ಬಹುಮಾನವೆಷ್ಟು ಗೊತ್ತಾ?
Advertisement
ಕೊನೆಯಲ್ಲಿ ಧೋನಿ ಔಟಾಗದೇ 18 ರನ್(6 ಎಸೆತ, 3 ಬೌಂಡರಿ, 1 ಸಿಕ್ಸರ್), ಮೊಯಿನ್ ಆಲಿ 16 ರನ್(12 ಎಸೆತ, 2 ಬೌಂಡರಿ) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.
ಈ ಮೊದಲು ಕ್ವಾಲಿಫೈಯರ್ ಪಂದ್ಯದ ಟಾಸ್ ಗೆದ್ದ ಚೆನ್ನೈ ತಂಡ ಬೌಲಿಂಗ್ ಆಯ್ದು ಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ತಂಡ ಚೆನ್ನೈ ಲೆಕ್ಕಾಚಾರದಂತೆ ಆರಂಭದಲ್ಲಿ ಶಿಖರ್ ಧವನ್ 7 ರನ್ (7 ಎಸೆತ, 1 ಬೌಂಡರಿ) ಸಿಡಿಸಿ ಜೋಶ್ ಹೇಜಲ್‍ವುಡ್‍ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ನಂತರ ಬಂದ ಶ್ರೇಯಸ್ ಅಯ್ಯರ್ ಬಂದಷ್ಟೇ ವೇಗವಾಗಿ 1ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಈ ಮೂಲಕ ಆರಂಭದಲ್ಲಿ ಚೆನ್ನೈ ಮೇಲುಗೈ ಪಡೆದುಕೊಂಡಿತು. ಇದನ್ನೂ ಓದಿ: ಇನ್ಮುಂದೆ ಚೆನ್ನೈ ಪರ ಆಡುತ್ತೀನಾ ಇಲ್ಲವೋ ಗೊತ್ತಿಲ್ಲ: ಧೋನಿ ಅಚ್ಚರಿಯ ಹೇಳಿಕೆ
ನಂತರ ಬಂದ ಅಕ್ಷರ್ ಪಟೇಲ್ ಕೂಡ ಹೆಚ್ಚು ಹೊತ್ತು ಕ್ರೀಸ್‍ನಲ್ಲಿ ನಿಲ್ಲಲಿಲ್ಲ 10 ರನ್ (11 ಎಸೆತ, 1 ಬೌಂಡರಿ) ಸಿಡಿಸಿ ಔಟ್ ಆದರು. ಆ ಬಳಿಕ ಬಂದ ರಿಷಬ್ ಪಂತ್, ಒಂದು ಕಡೆಯಲ್ಲಿ ಆರಂಭಿಕನಾಗಿ ಬಂದು ಅಬ್ಬರಿಸುತ್ತಿದ್ದ ಪೃಥ್ವಿ ಶಾ ಜೊತೆಗೂಡಿ ಇನ್ನಷ್ಟು ರನ್ ಹೆಚ್ಚಿಸಲು ಆರಂಭಿಸುತ್ತಿದ್ದಂತೆ, ಪೃಥ್ವಿ ಶಾ 60 ರನ್ (34 ಎಸೆತ 7 ಬೌಂಡರಿ, 3 ಸಿಕ್ಸ್) ಚಚ್ಚಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಶಿಮ್ರಾನ್ ಹೆಟ್ಮಾಯೆರ್ ಜೊತೆಗೂಡಿದ ಪಂತ್ ಅಬ್ಬರಿಸಲು ಆರಂಭಿಸಿದರು. ಈ ಜೊಡಿ 5ನೇ ವಿಕೆಟ್‍ಗೆ 83 ರನ್ (50 ಎಸೆತ) ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿತು. ಹೆಟ್ಮಾಯೆರ್ 37 ರನ್ (24 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು. ಕೊನೆಯವರೆಗೆ ಬ್ಯಾಟ್‍ಬೀಸಿದ ಪಂತ್ 51 ರನ್ ( 35 ಎಸೆತ, 3 ಬೌಂಡರಿ, 2 ಸಿಕ್ಸ್) ಸಿಡಿಸಿ ಅಜೇಯರಾಗಿ ಉಳಿದರು ಜೊತೆಗೆ ತಂಡದ ಮೊತ್ತವನ್ನು 170ರ ಗಡಿದಾಟಿಸಿದರು. ಅಂತಿಮವಾಗಿ ಡೆಲ್ಲಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 172 ರನ್ ಮಾಡಿತು.
ಚೆನ್ನೈ ಪರ ಜೋಶ್ ಹೇಜಲ್‍ವುಡ್ 2 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ, ಮೊಯಿನ್ ಆಲಿ ಮತ್ತು ಬ್ರಾವೋ ತಲಾ ಒಂದುವಿಕೆಟ್ ಪಡೆದರು.