– ರಾಜ್ಯ ಬಿಜೆಪಿಯಲ್ಲಿ ಅತೃಪ್ತಿಯ ಪ್ರಶ್ನೆಯೇ ಬರುವುದಿಲ್ಲ
ಗೋವಾ/ ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುದ್ಧಿವಂತ ರಾಜಕಾರಣಿಯಾಗಿದ್ದಾರೆ. ಅವರು ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಅತೃಪ್ತಿಯ ಪ್ರಶ್ನೆಯೇ ಬರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
Interacted with the Booth Presidents and above Karyakartas of Mandrem Assembly constituency in the presence of @BJP4Goa OGS Sri Satish Dhond and MLA Sri Dayanand Sopte.
I asked them to reach out to the people with the welfare schemes of PM @narendramodi and CM @DrPramodPSawant. pic.twitter.com/tCOktuzNnp
— C T Ravi ???????? ಸಿ ಟಿ ರವಿ (@CTRavi_BJP) August 17, 2021
Advertisement
ಗೋವಾದ ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಯಕರಿದ್ದಾರೆ. ಇದರಿಂದಾಗಿ ಸ್ವಾಭಾವಿಕವಾಗಿ ಮಂತ್ರಿ ಸ್ಥಾನದ ಆಕಾಂಕ್ಷಿಗಳಿದ್ದರು, ಕೆಲವರಿಗೆ ಮಂತ್ರಿ ಸ್ಥಾನ ಲಭಿಸಿದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದ ಜನತೆಯ ಸಮಸ್ಯೆಗಳಿಗೆ ಉತ್ತಮವಾಗಿ ಸ್ಪಂದಿಸಲಾಗುತ್ತಿದೆ. ಇದರಿಂದಾಗಿ ಮುಂಬರುವ ಚುನಾವಣೆಯಲ್ಲಿಯೂ ಮತ್ತೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು. ಇದನ್ನೂ ಓದಿ: ಅವಳಿ-ಜವಳಿ ಕಥೆ ಹೇಳಿ 2ನೇ ಮದುವೆಗೆ ಸಿದ್ಧನಾಗಿ ಪೊಲೀಸರ ಬಲೆಗೆ ಬಿದ್ದ
Advertisement
Addressed the Karyakartas meeting of the Pedne assembly constituency in Goa.
Deputy Chief Minister Sri Manohar Azgaonkar, @BJP4Goa Organization General Secretary Sri Satish Dhond, Booth Presidents and above Karyakartas were present during the organizational meeting. pic.twitter.com/D8DAEwOiJV
— C T Ravi ???????? ಸಿ ಟಿ ರವಿ (@CTRavi_BJP) August 17, 2021
Advertisement
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಉತ್ತಮ ನಿರ್ಣಯ ತೆಗೆದುಕೊಳ್ಳಲಾಗುತ್ತಿದೆ, ಮೋದಿಯವರಿಗೆ ಈ ಮೂಲಕ ಅಭಿನಂದಿಸುತ್ತೇನೆ. ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ 34 ಕೋಟಿ ಜನಸಂಖ್ಯೆಯಿತ್ತು. ಈಗ 140 ಕೋಟಿ ಜನಸಂಖ್ಯೆಯಿದೆ. ಇದರಿಂದಾಗಿ ದೇಶಾದ್ಯಂತ ವಿಚಾರ ಮಾಡುವ ಅಗತ್ಯವಿದೆ. ಇದು ಕೇವಲ ಉತ್ತರಪ್ರದೇಶದ ವಿಚಾರವಲ್ಲ, ದೇಶವೇ ವಿಚಾರ ಮಾಡುವಂತಹದ್ದಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕವೂ ವಿಚಾರ ಮಾಡಬೇಕು, ಮಹಾರಾಷ್ಟ್ರವೂ ವಿಚಾರ ಮಾಡಬೇಕು, ಕೇರಳವೂ ವಿಚಾರ ಮಾಡಬೇಕು, ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಡೀ ದೇಶವೇ ವಿಚಾರ ಮಾಡಬೇಕು ಎಂದು ಹೇಳಿದ್ದಾರೆ.