– ಜೋಶಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ ಎಂದ ಗೃಹ ಸಚಿವ
ಹುಬ್ಬಳ್ಳಿ: ಸಿಟಿ ರವಿ (CT Ravi) ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಹೆಬ್ಬಾಳ್ಕರ್ (Lakshmi Hebbalkar) ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ (CID) ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಹೇಳಿದ್ದಾರೆ.
Advertisement
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು. ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 6 ಗಂಟೆಗಳ ಕಾಲ ಸರ್ಕಾರಿ ಅಧಿಕಾರಿ ಡಿಜಿಟಲ್ ಅರೆಸ್ಟ್ – 19 ಲಕ್ಷ ರೂ. ವಂಚನೆ
Advertisement
Advertisement
ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು. ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಮುಡಾ ಕೇಸ್ನಲ್ಲಿ ಬಿಗ್ ಅಪ್ಡೇಟ್ – ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ
Advertisement
ಜಿ.ಪರಮೇಶ್ವರ್ ಅಸಮರ್ಥ ಗೃಹ ಸಚಿವ ಎಂಬ ಜೋಶಿ ಲೇವಡಿ ವಿಚರ್ವಾಗಿ ಪ್ರತಿಕ್ರಿಯಿಸಿದ ಅವರು, ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಗುಲಾಬ್ ಜಾಮೂನ್ ಅಂತ ನಂಬರ್ ಸೇವ್ ಮಾಡಿಕೊಂಡಿದ್ದ ಶ್ವೇತಾ – ವರ್ತೂರ್ ಪ್ರಕಾಶ್ಗೆ ಬಂಧನ ಭೀತಿ?