ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ತಂದೆ ನಿಧನರಾಗಿದ್ದಾರೆ.
ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ.
ಮೊದಲ ಬಾರಿಗೆ ಅಪ್ಪನಿಲ್ಲದೆ ಲೋಕವನ್ನು ನಾನೆದುರಿಸಬೇಕಾಗಿದೆ.
ಓಂಶಾಂತಿ ಅಣ್ಣ.
— C T Ravi ???????? ಸಿ ಟಿ ರವಿ (@CTRavi_BJP) January 29, 2022
ಟ್ವೀಟ್‍ನಲ್ಲಿ ಏನಿದೆ?: ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. ಮೊದಲ ಬಾರಿಗೆ ಅಪ್ಪನಿಲ್ಲದೆ ಲೋಕವನ್ನು ನಾನೆದುರಿಸಬೇಕಾಗಿದೆ. ಓಂಶಾಂತಿ ಅಣ್ಣ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ತಿಮ್ಮೇಗೌಡ(92) ವಯಸ್ಸಿನವರಾಗಿದ್ದು, ವಯೋಸಹಜವಾದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿ ಸಲಾಗಿತ್ತ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ರವಿವಾರ ಸ್ವಗ್ರಾಮ ಚಿಕ್ಕಮಾಗರಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮೃತರು ಪತ್ನಿ, ಸಿ.ಟಿ ರವಿ ಸಹಿತ ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.