Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಸ್ಟ್ರಾಂಗ್ ಯಾರು ಅನ್ನೋದು ಜಗತ್ತಿಗೆ ಗೊತ್ತಿದೆ- ಸಿಎಂ ವಿರುದ್ಧ ಸಿ.ಟಿ ರವಿ ಕಿಡಿ

Public TV
Last updated: March 20, 2024 6:12 pm
Public TV
Share
4 Min Read
siddaramaiah and ct ravi
SHARE

– ಸಿದ್ದರಾಮಯ್ಯನವ್ರಿಗೆ 5 ವರ್ಷ ಸಿಎಂ ಆಗಿರುವ ಖಾತರಿಯೇ ಇಲ್ಲ

ಬೆಂಗಳೂರು: ನಾನೇ ಸ್ಟ್ರಾಂಗ್ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಏನಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿಯವರು ಸಿದ್ದರಾಮಯ್ಯಗೆ (Siddaramaiah) ತಿರುಗೇಟು ನೀಡಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದ್ದು. ದುರ್ಬಲ ಆಡಳಿತ ಸಿದ್ದರಾಮಯ್ಯರದ್ದು. ಕಳೆದೊಂದು ವರ್ಷವನ್ನು ಗಮನಿಸಿದರೆ ಆಡಳಿತದ ಹಿಡಿತವೇ ಅವರಿಗೆ ಸಿಕ್ಕಿಲ್ಲ ಎಂದು ಅರಿವಾಗುತ್ತದೆ ಎಂದು ಟೀಕಿಸಿದರು. ನೀವೇ ನೇಮಕ ಮಾಡಿಕೊಂಡ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಸಲಹೆಗಾರರು ‘ಅಭಿವೃದ್ಧಿಗೆ ಬಿಡಿಗಾಸೂ ಕೊಡುತ್ತಿಲ್ಲ’ ಎಂದು ನಿಮ್ಮ ಗುಣಗಾನ ಮಾಡಿದ್ದಾರೆ ಎಂದು ವ್ಯಂಗ್ಯವಾಗಿ ತಿಳಿಸಿದರು.

ಹಿರಿಯ ಸಚಿವರು ಮತ್ತು ಶಾಸಕರೇ ನಿಮ್ಮ ಸ್ಟ್ರಾಂಗ್ ಆಡಳಿತಕ್ಕೆ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ನಿಮ್ಮ ಸರ್ಕಾರದ ನೀತಿಯ ಪರಿಣಾಮವಾಗಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳಾ ದೌರ್ಜನ್ಯ ಮಾತ್ರವಲ್ಲ ಬೆತ್ತಲೆ ಮೆರವಣಿಗೆ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆಗುತ್ತದೆ. ಹನುಮಾನ್ ಚಾಲೀಸಾ ಹಾಕುವುದು ಕೂಡ ಗಲಭೆಗೆ ಕಾರಣವಾಗುವಷ್ಟು ಆಡಳಿತ ಹದಗೆಟ್ಟಿದೆ ಎಂದು ಟೀಕಿಸಿದರು. ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಇನ್ನೇನು ಸಾಕ್ಷಿ ಬೇಕು ಎಂದು ಅವರು ಪ್ರಶ್ನಿಸಿದರು. ಮುಖ್ಯಮಂತ್ರಿಗಳ ಜೊತೆಗೆ ಶ್ಯಾಡೋ ಮುಖ್ಯಮಂತ್ರಿ, ಸೂಪರ್ ಸಿಎಂ- ಇವರೆಲ್ಲರೂ ಸಕ್ರಿಯರಾಗಿದ್ದಾರೆ. ಮುಖ್ಯಮಂತ್ರಿ ದುರ್ಬಲವಾಗಿದ್ದಾರೆ ಎಂದೇ ಇದರ ಅರ್ಥ ಎಂದು ಅವರು ವಿಶ್ಲೇಷಣೆ ಮಾಡಿದರು.

NARENDRA MODI SIDDARAMAIAH

ಮೋದಿಯವರಿಗೆ ದೇಶ- ವಿದೇಶಗಳ ಮನ್ನಣೆ: ಮುಖ್ಯಮಂತ್ರಿಗಳು ತಮ್ಮ ಟ್ವೀಟ್‍ನಲ್ಲಿ ‘ನಾನೇ ಸ್ಟ್ರಾಂಗ್ ಸಿಎಂ; ವೀಕ್ ಪಿಎಂ’ ಎಂದಿದ್ದಾರೆ. ಯಾರು ತನ್ನನ್ನು ತಾನು ಸ್ಟ್ರಾಂಗ್ ಎನ್ನುವವರು ವೀಕ್ ಆಗಿರುತ್ತಾರೆ. ಮೋದಿಜೀ (Narendra Modi) ಅವರು ಬಲಿಷ್ಠ ನಾಯಕ ಎಂದು ಕೇವಲ ನಮ್ಮ ಪಕ್ಷ, ನಮ್ಮ ನಾಯಕರು ಮತ್ತು ಕಾರ್ಯಕರ್ತರು ಹೇಳುತ್ತಿಲ್ಲ. ದೇಶದ ಜನತೆ ಮಾತ್ರವಲ್ಲದೆ ವಿಶ್ವದ ಅಗ್ರಗಣ್ಯ ನಾಯಕರು ಮೋದಿಯವರನ್ನು ಅತ್ಯಂತ ಬಲಿಷ್ಠ ನಾಯಕರು ಎನ್ನುತ್ತಾರೆ ಎಂದು ಸಿ.ಟಿ.ರವಿ (CT Ravi) ಅವರು ವಿಶ್ಲೇಷಿಸಿದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಮುರಿಯೋಲ್ಲ, ಹಾಲು-ಜೇನು ರೀತಿ ಸಂಬಂಧ ಇರಲಿದೆ: ಆರ್.ಅಶೋಕ್

ಅಮೆರಿಕದ ಅಧ್ಯಕ್ಷರು ಮೋದಿಯವರು ವಿಶ್ವದ ಪ್ರಖ್ಯಾತ ನಾಯಕ ಎನ್ನುತ್ತಾರೆ. ಇಸ್ರೇಲ್ ಪ್ರಧಾನಿ ಕೂಡ ಮೋದಿಜೀ ಅವರನ್ನು ಅತ್ಯಂತ ಜನಪ್ರಿಯ ನಾಯಕ ಎಂದಿದ್ದಾರೆ. ಜಗತ್ತಿನ 11 ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಮೋದಿಯವರಿಗೆ ನೀಡಿವೆ ಎಂದು ಅವರು ವಿವರಿಸಿದರು. ಅತಿ ಹೆಚ್ಚು ವಿದೇಶದ ನಾಗರಿಕ ಪ್ರಶಸ್ತಿಯನ್ನು ಮೋದಿಯವರು ಪಡೆದುಕೊಂಡಿದ್ದಾರೆ ಎಂದರು.

ಉಕ್ರೇನ್- ರಷ್ಯಾ ಯುದ್ಧದ ಸಮಯದಲ್ಲಿ ಪ್ರಧಾನಿ ಮೋದಿಯವರ ಮಧ್ಯಪ್ರವೇಶದಿಂದ ಪರಮಾಣು ಬಾಂಬ್ ಪ್ರಯೋಗ ತಪ್ಪಿದೆ ಎಂದು ಅಮೇರಿಕವೇ ಹೇಳಿದೆ. ಕತಾರ್‌ ನಲ್ಲಿ ಮರಣದಂಡನೆಗೆ ಗುರಿ ಆಗಿದ್ದಂಥ ನೌಕಾಸೇನೆಯ ನಿವೃತ್ತ ಅಧಿಕಾರಿಗಳನ್ನು ಮರಣದಂಡನೆಯಿಂದ ಬಿಡಿಸಿ ಈಚೆಗೆ ಸುರಕ್ಷಿತವಾಗಿ ಕರೆದುಕೊಂಡು ಬಂದವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಂದು ತಿಳಿಸಿದರು. ಉಕ್ರೇನ್- ರಷ್ಯಾ ಯುದ್ಧದ ಸಂದರ್ಭದಲ್ಲಿ 48 ಗಂಟೆಗಳ ಕಾಲ ಯುದ್ಧ ನಿಲುಗಡೆ ಮಾಡಿ, 23 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ದೇಶಕ್ಕೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ಸಿರಿಯಾ, ಇಸ್ರೇಲ್, ಸುಡಾನ್, ಅಫ್ಘಾನಿಸ್ತಾನ ಇತ್ಯಾದಿ ಬೇರೆಬೇರೆ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ. 2014ಕ್ಕೆ ಮುಂಚೆ ಗ್ಲೋಬಲ್ ರೇಟಿಂಗ್ ಕಂಪನಿಗಳು ಭಾರತವನ್ನು ವಿಶ್ವದ ದುರ್ಬಲ ಆರ್ಥಿಕತೆ ಇರುವ 5 ರಾಷ್ಟ್ರಗಳಲ್ಲಿ ಒಂದು ಎಂದು ರೇಟಿಂಗ್ ನೀಡಿದ್ದವು. ದುರ್ಬಲ ಆರ್ಥಿಕತೆಯಿಂದ ಬಲಿಷ್ಠ ಆರ್ಥಿಕತೆಯಲ್ಲಿ 5ನೇ ಸ್ಥಾನಕ್ಕೆ ಭಾರತ ಏರಿದೆ ಎಂದು ಹೇಳಿದರು. ಒಂದೆರಡು ವರ್ಷಗಳಲ್ಲಿ ನಾವು 3ನೇ ಸ್ಥಾನಕ್ಕೆ ದಾಪುಗಾಲಿಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2014ರಲ್ಲಿ 322 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಇದ್ದರೆ, ಇವತ್ತು 636 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಇದೆ. ರಫ್ತಿನಲ್ಲಿ ನಾವು ಇದುವರೆಗಿನ ಎಲ್ಲ ದಾಖಲೆಗಳನ್ನು ಮುರಿದಿದ್ದೇವೆ. 776 ಬಿಲಿಯನ್ ಡಾಲರ್ ಮೌಲ್ಯದ ಸ್ವತ್ತುಗಳನ್ನು ಭಾರತ ರಫ್ತು ಮಾಡಿದೆ. ಒಂದು ಕಾಲದಲ್ಲಿ ಶೇ 98 ಮೊಬೈಲ್‍ಗಳ ಆಮದಾಗುತ್ತಿದ್ದರೆ, ಸ್ಟ್ರಾಂಗ್ ಪಿಎಂನ ಮೇಕ್ ಇನ್ ಇಂಡಿಯಾ ಕರೆಯ ಮೂಲಕ ಇವತ್ತು ಶೇ.98 ರಷ್ಟು ಮೊಬೈಲ್‍ಗಳು ಭಾರತದಲ್ಲೇ ತಯಾರಾಗುತ್ತಿವೆ ಎಂದು ಅಂಕಿ-ಅಂಶಗಳನ್ನು ನೀಡಿದರು.

corona vaccine students 1

ಕೋವಿಡ್ ಸಂಬಂಧ 2 ವ್ಯಾಕ್ಸಿನ್ ಗಳನ್ನು ಭಾರತದಲ್ಲೇ ತಯಾರಿಸಿ 140 ಕೋಟಿ ಜನರಿಗೆ ಉಚಿತವಾಗಿ ವಿತರಣೆ ಮಾಡಿ, 100ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ಮೈತ್ರಿಯ ಮೂಲಕ ರಫ್ತು ಮಾಡಿದವರು. ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿ. ಭಯೋತ್ಪಾದನೆಗೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಉತ್ತರ ಕೊಟ್ಟಿದ್ದೇವೆ ಎಂದು ತಿಳಿಸಿದರು. ಭಾರತವೂ ಸುರಕ್ಷಿತ- ಭಾರತೀಯರೂ ಸುರಕ್ಷಿತವಾಗಿದ್ದಾರೆ. ಭಾರತದ ಆರ್ಥಿಕತೆಯೂ ವೇಗಗತಿಯಲ್ಲಿ ಬೆಳೆಯುತ್ತಿದೆ. ಬಡವರಿಗೆ ಬಲ ತುಂಬುತ್ತಿದ್ದಾರೆ. ಹೀಗೆ ಮೋದಿಯವರ ಸಾಧನೆಯನ್ನು ಗುಣಗಾನ ಮಾಡಲು ಇಂಥ ನೂರಾರು ಉದಾಹರಣೆಗಳನ್ನು ತೆಗೆದುಕೊಳ್ಳಬಹುದು ಎಂದು ವಿಶ್ಲೇಷಿಸಿದರು. ಮೋದಿ ಅವರು ಸ್ಟ್ರಾಂಗ್ ಎಂದು ದೇಶದ ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ; ವಿದೇಶದವರೂ ಮೋದಿ ಈಸ್ ದಿ ಸ್ಟ್ರಾಂಗೆಸ್ಟ್ ಮ್ಯಾನ್ ಎಂದು ಒಪ್ಪಿಕೊಂಡಿದ್ದಾರೆ.

TAGGED:bengaluruCT Ravinarendra modisiddaramaiahನರೇಂದ್ರ ಮೋದಿಬೆಂಗಳೂರುಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Sanjay Dutt 4
ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್
5 hours ago
narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
8 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
1 day ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
1 day ago

You Might Also Like

Capture 1
Latest

ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ

Public TV
By Public TV
26 minutes ago
BSF Sub Inspector Mohammed Imteyaz
Crime

ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

Public TV
By Public TV
1 hour ago
Omar Abdullah drone attack
Latest

ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

Public TV
By Public TV
2 hours ago
Ceasefire violation
Latest

ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್‌ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು

Public TV
By Public TV
2 hours ago
kea
Bengaluru City

ಡಿಸಿಇಟಿ: ಅರ್ಜಿ ಸಲ್ಲಿಸಲು ಮೇ 13ರವರೆಗೆ ದಿನಾಂಕ ವಿಸ್ತರಣೆ: ಕೆಇಎ

Public TV
By Public TV
3 hours ago
siddaramaiah 5
Bengaluru City

ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?