– ಮುಸ್ಲಿಮರನ್ನ ಇಡಿಯಾಗಿ, ಹಿಂದೂಗಳನ್ನ ಒಡೆದು ಆಳುವ ನೀತಿಗೆ ನಮ್ಮ ಬೆಂಬಲವಿಲ್ಲ
– ಭಯೋತ್ಪಾದನೆ ಜಾಲದ ವಿಸ್ತರಣೆಯ ಸಂಚು ಮಾಡುತ್ತಿದೆ
ಚಿಕ್ಕಮಗಳೂರು: ರಾಜ್ಯದ ಜನಸಂಖ್ಯೆಯಲ್ಲಿ 2ನೇ ದೊಡ್ಡ ಸಂಖ್ಯೆಯಲ್ಲಿರುವವರು ಅಲ್ಪಸಂಖ್ಯಾತರಾಗುತ್ತಾರಾ ಎಂದು ಮಾಜಿ ಸಚಿವ ಸಿ.ಟಿ ರವಿ (C T Ravi) ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ (Chikkamagaluru) ಜಾತಿ ಜನಗಣತಿ ವರದಿ (Caste Census Report) ಮಾತನಾಡಿದ ಅವರು, ಸಂವಿಧಾನ ಬದ್ಧವಾಗಿ ಜಾತಿ ಜನಗಣತಿ ಮಾಡುವ ಅಧಿಕಾರ ಕೇಂದ್ರಕ್ಕೆ ಇರುವುದು. ಇವರು ಸಾಮಾಜಿಕ, ಆರ್ಥಿಕ ಸಮೀಕ್ಷೆ ಎಂದು ಹೇಳಿದ್ದಾರೆ. ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಈಗಲೇ ಸತ್ಯ-ಸುಳ್ಳು ಎಂದು ಪ್ರತಿಕ್ರಿಯಿಸುವುದು ಕಷ್ಟ. ಅನಧಿಕೃತವಾಗಿ ಸೋರಿಕೆ ಆಗಿರುವುದನ್ನು ಸತ್ಯ ಎಂದು ಭಾವಿಸಿದ್ರೆ ಚರ್ಚೆ ಹುಟ್ಟು ಹಾಕುತ್ತದೆ ಎಂದರು. ಇದನ್ನೂ ಓದಿ: ಜಾತಿ ಜನಗಣತಿ ವರದಿಯೇ ಸಿದ್ದರಾಮಯ್ಯಗೆ ಮರಣ ಶಾಸನ ಆಗಬಹುದು: ವಿ. ಸೋಮಣ್ಣ
ಅಲ್ಪಸಂಖ್ಯಾತರು ಯಾರು? ರಾಜ್ಯದ ಜನಸಂಖ್ಯೆಯಲ್ಲಿ 2ನೇ ದೊಡ್ಡ ಸಂಖ್ಯೆಯಲ್ಲಿರುವವರು ಅಲ್ಪಸಂಖ್ಯಾತರಾಗುತ್ತಾರಾ? ಮೀಸಲಾತಿ ಸಂಬಂಧ ಕೋರ್ಟ್‌ನಲ್ಲಿ ಮೊಕದ್ದಮೆ ಇದ್ದಾಗ ಕೇಂದ್ರ ಮೀಸಲಾತಿ ಪರ ಪ್ರಮಾಣಪತ್ರ ಸಲ್ಲಿಸಿತ್ತು. ಬಡ್ತಿ ಮೀಸಲಾತಿ ಪರ ಪ್ರಮಾಣಪತ್ರ ಸಲ್ಲಿಸಿತ್ತು. ಇದು ಮೀಸಲಾತಿ ಬಗ್ಗೆ ಬಿಜೆಪಿಗೆ ಇರುವ ಬದ್ಧತೆ. ಸಮಾಜ ಒಡೆಯುವ ದುರುದ್ದೇಶವನ್ನ ನಾವು ಬೆಂಬಲಿಸುವುದಿಲ್ಲ. ಕೆಲ ವ್ಯಕ್ತಿ, ಸಂಘಟನೆ, ರಾಜಕೀಯ ಪಕ್ಷಗಳು ಹಿಂದೂ ಸಮಾಜವನ್ನ ಜಾತಿವಾರು ಒಡೆಯುತ್ತಿವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮತಾಂತರಕ್ಕೆ ಒಪ್ಪದ ಪತ್ನಿ, ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ – 9 ಜನರ ವಿರುದ್ಧ ಎಫ್‍ಐಆರ್
ಮುಸ್ಲಿಮರಲ್ಲೂ 56 ಜಾತಿಗಳಿವೆ, ಮುಟ್ಟಿಸಿಕೊಳ್ಳದ ಜಾತಿ ಕೂಡ ಇದ್ದಾರೆ. ಪಸ್ಮಾಂಡ ಮುಸ್ಲಿಂ ಇದ್ದಾರೆ. ಯಾರು ಪ್ರವಾದಿ ವಂಶಸ್ಥರು ಅಂತ ಭಾವಿಸುತ್ತಾರೆ ಅವರು ಹೆಣ್ಣು ಕೊಡಲ್ಲ, ಹೆಣ್ಣು ತರಲ್ಲ. ಮುಸ್ಲಿಮರನ್ನ ಹಿಡಿಯಾಗಿ, ಹಿಂದೂಗಳನ್ನ ಒಡೆದು ಆಳುವ ನೀತಿಗೆ ನಮ್ಮ ಬೆಂಬಲವಿಲ್ಲ. ಸಾಮಾಜಿಕ ನ್ಯಾಯ ಬಿಜೆಪಿ ಬದ್ಧತೆಯಾಗಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಾತಿಗಣತಿಯಲ್ಲಿ ಲಿಂಗಾಯತರ ಸಂಖ್ಯೆ ಕಡಿಮೆ ಆಗಲು ನಾವೇ ಕಾರಣ: ಎಂ.ಬಿ.ಪಾಟೀಲ್
ವಕ್ಫ್ ಬೋರ್ಡ್ ಕಾಯ್ದೆ (Waqf Board Act) ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡ್ತಿದೆ. ಹಿಂದೆ ಸಿಎಎ ವಿರುದ್ಧವೂ ಕಾಂಗ್ರೆಸ್ ಇದೇ ಅಪಪ್ರಚಾರ ಮಾಡಿತ್ತು. ಕಾಂಗ್ರೆಸ್ ನಿಲುವು ರಾಷ್ಟ್ರಘಾತುಕ ನಿಲುವು, ಈಗ ವಕ್ಫ್ ಬಿಲ್‌ನಲ್ಲೂ ಅಪಪ್ರಚಾರ ಮಾಡುತ್ತಿದ್ದಾರೆ. ನ್ಯಾಯಬದ್ಧವಾದ ಜಮೀನನ್ನ ಯಾರೂ ಕಿತ್ತುಕೊಳ್ಳಲ್ಲ. ಅಕ್ರಮವಾಗಿ ಕಬಳಿಸಿದ ಜಮೀನನ್ನು ಬಿಡಲೇಬೇಕು. ರೈತರ ಜಮೀನು, ಸಾವಿರಾರು ವರ್ಷಗಳ ದೇವಸ್ಥಾನದ ಜಮೀನು ನಮ್ಮದು ಎಂದರೆ ಬಿಡಲೇಬೇಕು. ವಿಧಾನಸೌಧ, ಸುಪ್ರೀಂ ಕೋರ್ಟ್, ಹೈಕೋರ್ಟ್, ಪಾರ್ಲಿಮೆಂಟ್ ನಮ್ಮದು ಎಂದು ಹೇಳಲು ಅವಕಾಶ ಕೊಡಬೇಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ – ಹೈಕೋರ್ಟ್‌ಗೆ 2,300 ಪುಟಗಳ ಅಂತಿಮ ವರದಿ ಸಲ್ಲಿಕೆ
ಅಕ್ರಮಕ್ಕೆ ಅವಕಾಶವಿಲ್ಲ. ನ್ಯಾಯಬದ್ಧವಾಗಿದ್ದರೆ ದಾಖಲೆ ನೋಡುತ್ತಾರೆ. ಗ್ರ‍್ಯಾಂಟ್ ಆಗಿದ್ಯಾ, ದಾನ ಕೊಟ್ಟಿದ್ದಾರಾ, ಕೊಂಡುಕೊಂಡಿದ್ದಾರಾ ನೋಡಬೇಕು. ಅದರಲ್ಲಿ ತಪ್ಪೇನಿದೆ. ಮಸೀದಿ ಕಿತ್ತುಕೊಳ್ತಾರೆ ಎಂದು ಅಪಪ್ರಚಾರ ಮಾಡ್ತಿದ್ದಾರೆ. ಆ ರೀತಿ ಏನು ಆಗಲ್ಲ. ಅಪಪ್ರಚಾರದ ಜೊತೆ ಕಾಂಗ್ರೆಸ್ ಬೆಂಬಲ ನೀಡುತ್ತಿರುವುದು ರಾಷ್ಟ್ರಘಾತುಕ. ಭಯೋತ್ಪಾದಕ ಸಂಘಟನೆ, ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಸಂದರ್ಭದ ಲಾಭ ಪಡೆದು ಭಯೋತ್ಪಾದನೆ ಜಾಲದ ವಿಸ್ತರಣೆಯ ಸಂಚು ಮಾಡುತ್ತಿರುವ ಮಾಹಿತಿ ಬಂದಿದೆ ಎಂದು ಗುಡುಗಿದರು. ಇದನ್ನೂ ಓದಿ: ಪತ್ನಿ ಆತ್ಮಹತ್ಯೆ; ಹಳೇ ಲವರ್ ಜೊತೆಗಿದ್ದ ಅಕ್ರಮ ಸಂಬಂಧದ ಬಗ್ಗೆ ಒಪ್ಪಿಕೊಂಡ ಟೆಕ್ಕಿ ಪತಿ
ಸಂವಿಧಾನ ಬಾಹಿರವಾಗಿ ನಡೆದುಕೊಳ್ಳಬೇಕೆಂದು ಕಾಂಗ್ರೆಸ್ ಸಂಚು
ಮನವಿ ಕೊಟ್ಟರೆ ಆಗಲ್ಲ. ಒಂದೊಂದು ಊರಲ್ಲಿ 10 ಹೆಣ ಬೀಳಬೇಕು ಎಂದು ಕಾಂಗ್ರೆಸ್ ಕಾರ್ಪೋರೇಟರ್ ಕಬೀರ್ ಖಾನ್ ಹೇಳುತ್ತಾನೆ. ರೈಲು, ಬಸ್‌ಗಳನ್ನು ಸುಡಬೇಕು. ದೊಂಬಿ ನಡೆಯಬೇಕು ಆಗ ಮಾತ್ರ ಬಗ್ಗಿಸಬಹುದು ಎಂದು ಹೇಳುತ್ತಾನೆ. ಪ್ರಜಾಪ್ರಭುತ್ವ ವಿರೋಧಿಯಾಗಿ ಭಯೋತ್ಪಾದನೆ ನಡೆಸಬೇಕು ಎಂದು ಎಂದು ಹೇಳುವವನು ಕಾಂಗ್ರೆಸ್ ಪಕ್ಷ ಕಾರ್ಪೋರೇಟರ್. ಈವರೆಗೂ ಪಕ್ಷ ಅವನನ್ನ ಕಿತ್ತು ಹಾಕಿಲ್ಲ. ಫತ್ವಾ ಹೊರಡಿಸಿಲ್ಲ, ಮುಸ್ಲಿಂ ಸಂಘಟನೆಯೂ ಅದನ್ನ ತಪ್ಪು ಅಂತ ಹೇಳಿಲ್ಲ. ಸಂವಿಧಾನ ಬಾಹಿರವಾಗಿ ನಡೆದುಕೊಳ್ಳಬೇಕೆಂದು ಸಂಚು ನಡೆಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.