ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವೈಯಕ್ತಿಕ ಸಾಮರ್ಥ್ಯದ ಬಗ್ಗೆ ಮಾತನಾಡಲ್ಲ. ಆದರೆ, ಅವರ ರಾಜಕೀಯ ಸಾಮರ್ಥ್ಯ ಕೇವಲ ಕನಕಪುರಕಷ್ಟೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದರು.
ಪಬ್ಲಿಕ್ ಟಿವಿಯ ಸಂದರ್ಶನದಲ್ಲಿ ಮಾತನಾಡಿದ್ದ ಡಿ.ಕೆ.ಶಿವಕುಮಾರ್, 2022 ಆಗಸ್ಟ್ ಬಳಿಕ ಬಿಜೆಪಿ ನನ್ನನ್ನು ಟಾರ್ಗೆಟ್ ಮಾಡುತ್ತದೆ ಎಂದು ಹೇಳಿದ್ದರು. ಡಿಕೆಶಿಯವರ ಈ ಹೇಳಿಕೆಗೆ ನಗರದ ಸಿಂಡಿಕೇಟ್ ಸರ್ಕಲ್‍ನಲ್ಲಿ ಮಾತನಾಡಿದ ಅವರು, ದೇಶದ ಜನರೇ ಕಾಂಗ್ರೆಸನ್ನು ಟಾರ್ಗೆಟ್ ಮಾಡಿದ್ದಾರೆ. ನಮಗೆ ಡಿ.ಕೆ.ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುವ ಅವಶ್ಯಕತೆ ಇಲ್ಲ ಎಂದು ವ್ಯಂಗ್ಯ ಮಾಡಿದರು.
Advertisement
Advertisement
ಡಿ.ಕೆ.ಶಿವಕುಮಾರ್ ಅವರು, ತಮ್ಮನ್ನು ತಾವು ವೈಭವೀಕರಿಸಿಕೊಳ್ಳಬಹುದು. ನಾನು ಅವರ ವೈಯಕ್ತಿಕ ಸಾಮರ್ಥ್ಯದ ಬಗ್ಗೆ ಮಾತನಾಡಲ್ಲ. ಪ್ರಶ್ನೆ ಮಾಡಲ್ಲ. ಆದರೆ, ಅವರ ರಾಜಕೀಯ ಸಾಮರ್ಥ್ಯ ಸಾಬೀತು ಮಾಡಿರೋದು ಕೇವಲ ಕನಕಪುರದಲ್ಲಷ್ಟೆ ಎಂದ ಅವರು, ಉಪ್ಪು ತಿಂದವರು ನೀರು ಕುಡಿಯುತ್ತಾರೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಅವರು ಏನೂ ತಪ್ಪು ಮಾಡಿಲ್ಲ ಎಂದಾದರೆ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.
Advertisement
Advertisement
ಒಂದು ರಾಜಕೀಯ ಪಕ್ಷದಲ್ಲಿ ಇದ್ದೇನೆ ಎಂದು ಶೆಲ್ಟರ್ ತೆಗೆದುಕೊಳ್ಳಲು ಆಗುವುದಿಲ್ಲ. ತಪ್ಪು ಮಾಡದೆ ಜೈಲಿಗೆ ಹೋದರೆ ಅದೊಂದು ಶಕ್ತಿಯಾಗುತ್ತದೆ. ತಪ್ಪು ಮಾಡಿದವರದ್ದು ರಾಜಕೀಯ ಅಂತ್ಯವಾಗುತ್ತದೆ ಎಂದು ಹೇಳಿದರು.
ಬಿಜೆಪಿಗೆ ಡಿಕೆಶಿಯವರನ್ನು ಟಾರ್ಗೆಟ್ ಮಾಡುವ ಅವಶ್ಯಕತೆ ಇಲ್ಲ. ದೇಶದ ಜನರೇ ಕಾಂಗ್ರೆಸನ್ನು ಟಾರ್ಗೆಟ್ ಮಾಡಿದ್ದಾರೆ. ಉತ್ತರಪ್ರದೇಶದಲ್ಲಿ ಮೈ ಲಡಕಿ ಹೂಂ, ಲಡ್ ಸಕ್ತಾ ಹೈ ಹೇ ಎಂದು ಪ್ರಿಯಾಂಕ ಗಾಂಧಿ ಅವರೇ ಚುನಾವಣೆ ನೇತೃತ್ವ ವಹಿಸಿದ್ದರು. ಅದು ಏನಾಯ್ತು. 387 ಕ್ಷೇತ್ರದಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಂಡಿತು ಎಂದು ಕಾಂಗ್ರೆಸ್ ಕಾಲೆಳೆದರು. ಇದನ್ನೂ ಓದಿ: ರೈತ ಸಂಘದಿಂದ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ
ಕಾಂಗ್ರೆಸ್ ಅವರೇ ಅಧಿಕಾರದಲ್ಲಿದ್ದ ಪಂಜಾಬ್‍ನಲ್ಲಿ ಹೀನಾಯವಾಗಿ ಸೋತರು. ಆಮ್ ಆದ್ಮಿ ಪಕ್ಷಕ್ಕೆ ರೆಡ್ ಕಾರ್ಪೆಟ್ ಹಾಸಿ ಕಕೊರ್ಂಡ್ ಬಂದು ಕೂರಿಸಿದ್ದಾರೆ. ದೇಶದ ಜನರೇ ಕಾಂಗ್ರೆಸ್ ಪಕ್ಷವನ್ನ ಟಾರ್ಗೆಟ್ ಮಾಡಿರುವಾಗ, ಡಿಕೆಶಿ ಟಾರ್ಗೆಟ್ ಮಾಡಿ ಏನಾಗಬೇಕೆಂದು ಪ್ರಶ್ನಿಸಿದರು. ಇದನ್ನೂ ಓದಿ: ಚಂಡಮಾರುತ ಎಫೆಕ್ಟ್- ಸಮುದ್ರದಲ್ಲಿ ತೇಲಿ ಬಂತು ಚಿನ್ನದ ರಥ!