ಬೆಂಗಳೂರು: ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ (RSS) ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.
ಆರ್‌ಎಸ್‌ಎಸ್ ಅವರು ನೋಂದಣಿ ಮಾಡಿಸಲು ರೆಡಿಯಾಗಿ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನೆಹರು ಪ್ರಧಾನಿ ಆಗಿದ್ದರು, ಅವರು ಆರ್‌ಎಸ್‌ಎಸ್ ವಿರೋಧ ಮಾಡಿದ್ರು. ಆರ್‌ಎಸ್‌ಎಸ್ ಇನ್ನು ಇದೆ. ನೆಹರು ಇಲ್ಲ. ಇಂದಿರಾಗಾಂಧಿ ತುರ್ತುಸ್ಥಿತಿ ಹೇರಿದ್ರು. ಆರ್‌ಎಸ್‌ಎಸ್ ಬ್ಯಾನ್ ಮಾಡಿದ್ರು. ಇಂದಿರಾಗಾಂಧಿ ಇಲ್ಲ. ಆರ್‌ಎಸ್‌ಎಸ್ ಇನ್ನು ಇದೆ. ಪ್ರಿಯಾಂಕ್ ಅವರೇ ನೀವು ನಿನ್ನೆ ಮೊನ್ನೆ ಹೋಂ ಮಿನಿಸ್ಟರ್ ಆಗಿರೋದು. ನಿಮ್ಮ ಅಪ್ಪ ನಿಮಗಿಂತ ಮುಂಚೆ ಗೃಹ ಸಚಿವರು ಆಗಿದ್ರು. ನಿಮ್ಮಪ್ಪನಿಂದ ಏನು ಮಾಡಲು ಆಗಿಲ್ಲ ಇನ್ನು ನಿಮ್ಮಿಂದ ಆಗುತ್ತಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಒಂದೇ ಕುಟುಂಬದ ಮೂವರು ನೇಣಿಗೆ ಶರಣು; ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ತಂದೆ-ತಾಯಿ, ಮಗ
ನೀವು ಸರ್ವಾಧಿಕಾರಿ ಅಲ್ಲ. ಇದು ನಿಮ್ಮ ಪಕ್ಷದ ಕೊನೆ ದಿನಗಳು. ನಿಮ್ಮ ಅಪ್ಪನ ಆಣೆ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲ್ಲ.ಆರ್‌ಎಸ್‌ಎಸ್ ರಾಷ್ಟ್ರದ ಕೆಲಸ, ವ್ಯಕ್ತಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ. ನೋಂದಣಿ ಮಾಡೋಕೆ ಅದು ಸಂಘ ಅಲ್ಲ. ಸಮಾಜವನ್ನ ಸಂಘಟಿಸುವ ಸಂಘಟನೆ ಅದು. ನಿಮಗೆ ಗೃಹ ಸಚಿವರಾಗಿ ಬೇರೆ ಕೆಲಸ ಇದೆ. ಅದನ್ನ ನೋಡಿ. ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ. ದರೋಡೆ, ಡ್ರಗ್ಸ್, ಹೆಣ್ಣು ಮಕ್ಕಳು ನಾಪತ್ತೆ ಈ ಬಗ್ಗೆ ಗಮನಹರಿಸಿ. ಆರ್‌ಎಸ್‌ಎಸ್‌ನಿಂದ ಅಪಾಯ ಇಲ್ಲ. ಇಲ್ಲೇ ಇದ್ದು ಬಾಂಬ್ ತಯಾರು ಮಾಡೋರ ಕಡೆ ಗಮನ ಕೊಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ವಿತರಣೆ ಮತ್ತಷ್ಟು ವಿಳಂಬ – ಈ ತಿಂಗಳು ಸಿಗೋದು ಡೌಟ್
ನೀವು ಹೋಂ ಮಿನಿಸ್ಟರ್, ಹೋಂ ಮಿನಿಸ್ಟರ್ ರೀತಿ ವರ್ತನೆ ಮಾಡಿ, ಗೂಂಡಾ ರೀತಿ ವರ್ತನೆ ಮಾಡಬೇಡಿ. ಅಧಿಕಾರ ಶಾಶ್ವತ ಅಲ್ಲ. ಅಧಿಕಾರದಲ್ಲಿ ಮೆರೆದವರಿಗೆ ಇಂದು ಪಶ್ಚಿಮ ಬಂಗಾಳ ಅಟ್ಟಾಡಿಸಿ ಹೊಡೆಯುತ್ತಿದ್ದಾರೆ. ಆ ಭಯದಿಂದ ಎಚ್ಚರಿಕೆ ವಹಿಸಿ. ನೀವು ಮಾಡಬೇಕಾದ ಕೆಲಸ ಬೇರೆ ಇದೆ ಅದನ್ನ ಮಾಡಿ. ಡ್ರಗ್ಸ್, ಅಕ್ರಮ ವಲಸಿಗರ ಬಗ್ಗೆ ಗಮನ ಕೊಡಿ. ಬೆಂಕಿ ಹಚ್ಚೋ ಕೆಲಸ ಮಾಡಬೇಡಿ. ಬೆಂಕಿ ಆರಿಸೋ ಕೆಲಸ ಮಾಡಿ. ಬೆಂಕಿ ಹಚ್ಚೋಕೆ ಹೋದ್ರೆ ಆ ಬೆಂಕಿ ನಿಮ್ಮನ್ನು ಸುಡುತ್ತದೆ ಎಂದು ಕೆಂಡ ಕಾರಿದರು. ಇದನ್ನೂ ಓದಿ: ಬಿಟ್‌ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿಯಿಂದ ನಲಪಾಡ್‌ಗೆ ಪಾಲು
