* ಇಸಿಗೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ ಎಂದು ಪ್ರಶ್ನೆ
ಬೆಂಗಳೂರು: ತಮ್ಮ ಮತಗಳ್ಳತನ (Vote Theft) ಆರೋಪದ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ? ಹಿಟ್ ಆಂಡ್ ರನ್ ಮಾಡುವುದೇ ಇವರ ಉದ್ದೇಶವೇ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ (CT Ravi) ಅವರು ಪ್ರಶ್ನಿಸಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‌ನಲ್ಲಿ ಇಂದು ಮಾಧ್ಯಮಗಳ ಜೊತೆ ಆಳಂದದಲ್ಲಿ (Alanda) ಮತದಾರರ ಪಟ್ಟಿಯಿಂದ ಹೆಸರು ತೆಗೆದ ಆರೋಪದ ಬಗ್ಗೆ ಮಾತನಾಡಿದರು. ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ಯಾವುದಾದರೂ ದೂರಿದ್ದರೆ ಅಫಿಡವಿಟ್ ಮೂಲಕ ಸಲ್ಲಿಸಲು ತಿಳಿಸಿದ್ದರು. ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಚುನಾವಣೆಯ ನೇತೃತ್ವವಹಿಸಿ 8-9 ಕಡೆ ಯಶಸ್ಸು ಕಂಡಿದ್ದಾರೆ. ಸುಮಾರು ಶೇ.92ರಷ್ಟು ವೈಫಲ್ಯ ಅವರದು. ತಮ್ಮ ಚುನಾವಣಾ ವೈಫಲ್ಯವನ್ನು ಅವರು ಚುನಾವಣಾ ಆಯೋಗದ ಹೆಗಲಿಗೆ ಕಟ್ಟಲು ಹೊರಟಿದ್ದಾರಾ ಎಂದು ಆಗ್ರಹಿಸಿದರು. ಇದನ್ನೂ ಓದಿ: `ಆಳಂದ ಫೈಲ್ಸ್’ | ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಚುನಾವಣಾ ಆಯೋಗ ಹೇಳಿದ್ದೇನು?
ಅವರದ್ದು ಆಧಾರಸಹಿತ ಆರೋಪವಾಗಿದ್ದರೆ ಆಧಾರದ ಜೊತೆ ಪ್ರಮಾಣಪತ್ರದೊಂದಿಗೆ ದೂರು ಸಲ್ಲಿಸಲಿ. ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆ ಮೇಲೆ ನಂಬಿಕೆ ಇದ್ದರೆ, ಕಾನೂನುಬದ್ಧವಾಗಿ ದೂರು ಕೊಡಬೇಕು. ಅವರಿಗೆ ತಮ್ಮ ವೈಫಲ್ಯವನ್ನು ಬೇರೆಯವರ ತಲೆಗೆ ಕಟ್ಟುವ ದುರುದ್ದೇಶ ಇದ್ದಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಚುನಾವಣಾ ಆಯೋಗವು ದೆಹಲಿ, ಬೆಂಗಳೂರು ಕಚೇರಿ ಹೊಂದಿದ್ದು, ರಾಜ್ಯಮಟ್ಟದ ಆಡಳಿತದ ಮೇಲೆ ಅವಲಂಬಿತವಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್ ನೇತೃತ್ವ, ಕಂದಾಯ ಇನ್‌ಸ್ಪೆಕ್ಟರ್ ನೇತೃತ್ವ, ಬೂತ್ ಮಟ್ಟದ ಅಧಿಕಾರಿಯಾಗಿ ಬಹುತೇಕ ಶಾಲಾ ಶಿಕ್ಷಕರು, ಕಂದಾಯ ಇಲಾಖೆ, ಬಿಬಿಎಂಪಿ ನೌಕರರ ಮೇಲೆ ಅವಲಂಬಿತವಾಗಿದೆ. ಇವರ ಆರೋಪ ಯಾರ ಮೇಲೆ? ಅವರ ಮೇಲೆ ಆರೋಪವಾದರೆ ಇವರಿಗೆ ಯಾರ ಮೇಲೂ ನಂಬಿಕೆ ಇಲ್ಲ ಎಂಬುದನ್ನು ಅದು ತೋರಿಸುತ್ತದೆ ಎಂದು ಟೀಕಿಸಿದರು.
ಇವರು ಆಸ್ತಿಕರೋ ನಾಸ್ತಿಕರೋ ಗೊತ್ತಿಲ್ಲ. ಆದರೆ, ಸಾವಿರ ಬಾರಿ ಸುಳ್ಳು ಹೇಳಿದರೆ, ಆ ಸುಳ್ಳೇ ಸತ್ಯವಾಗಿ ನಿರೂಪಿತ ಆಗುತ್ತದೆ ಎಂಬ ಮಾತನ್ನು ಗೊಬೆಲ್ ಹೇಳಿದ್ದ. ಬಹುಶಃ ಇವರು ಎಲ್ಲ ದೇವರನ್ನು ಹೊರಹಾಕಿ ಗೊಬೆಲನ್ನು ದೇವರಾಗಿ ಆರಾಧಿಸುವ ಸಾಧ್ಯತೆ ಇದೆ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಜಾತಿಗಣತಿಗೆ ಡಿಕೆಶಿ ಸೇರಿ ಹಲವು ಸಚಿವರ ಆಕ್ಷೇಪ, ನನಗೆ ಮೇಲ್ವರ್ಗದ ವಿರೋಧಿ ಅಂತಾ ಪಟ್ಟ ಕಟ್ಟುತ್ತಾರೆ: ಸಿಎಂ