Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗಾಂಧೀಜಿಗೆ ಗುಂಡಿಕ್ಕಿದ ನೀವು ಸಮಾಜದ ಉದ್ಧಾರ ಮಾಡುತ್ತೀರಾ? – ಸಿಟಿ ರವಿಗೆ ಎಚ್‌ಡಿಕೆ ತಿರುಗೇಟು

Public TV
Last updated: October 7, 2021 5:24 pm
Public TV
Share
5 Min Read
CT RAVI HDK
SHARE

ಬೆಂಗಳೂರು: ಸೇವೆ, ಸಂಸ್ಕಾರ ಆರ್‌ಎಸ್‌ಎಸ್‌ ಗುತ್ತಿಗೆಯಲ್ಲ. ದೇಶಕ್ಕಾಗಿ ನಿಮ್ಮ ಕೊಡುಗೆ, ತ್ಯಾಗ ಏನು? ಇಂದಿರಾಗಾಂಧಿ, ರಾಜೀವ್ ಗಾಂಧಿ ರಾಷ್ಟ್ರಕ್ಕಾಗಿ ಜೀವತ್ಯಾಗ ಮಾಡಿದರು. ನಿಮ್ಮಲ್ಲಿ ಅಂಥವರು ಒಬ್ಬರಿದ್ದಾರಾ? ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಗೇ ಗುಂಡಿಕ್ಕಿದವರು ನೀವು. ನೀವು ಸಮಾಜದ ಉದ್ಧಾರ ಮಾಡುತ್ತೀರಾ? ಇದಕ್ಕೇ ಆರ್‌ಎಸ್‌ಎಸ್‌ ʼವಿಶ್ವಕುಖ್ಯಾತಿʼ ಆಗಿದ್ದು ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಎಚ್‌ಡಿಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ಬಗ್ಗೆ ಮಾಡಿದ ಟೀಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಇಂದು ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿ ಸಂಘವನ್ನು ಸಮರ್ಥಿಸಿಕೊಂಡಿದ್ದರು.

rss 1

ಭಾರತೀಯರನ್ನು ಭಾರತಕ್ಕಾಗಿ ಮಿಡಿಯುವಂತೆ ಮಾಡಬಲ್ಲ ಸಂಸ್ಥೆ ಎಂದೇ ಆರ್‌ಎಸ್‌ಎಸ್‌ ವಿಶ್ವ ಖ್ಯಾತಿಯಾಗಿದೆ. ಮನೆ-ಮಠ, ಸ್ವಂತ ಬದುಕು ಬಿಟ್ಟು ಸಂಘ ಬಯಸುತ್ತಿರುವ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ತ್ಯಾಗಿಗಳ ದೊಡ್ಡಪಡೆಯೇ ಇಲ್ಲಿದೆ. ಸಮಾಜದಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿರುವ ಸಂಘವೇ ಎಂದರೆ ಆರ್‌ಎಸ್‌ಎಸ್‌ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಈಗ ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಹೇಳಿದ್ದು ಏನು?
ಮಾನ್ಯ ಸಿಟಿ ರವಿ ಅವರೇ, 2006ಕ್ಕಿಂತ ಮೊದಲು ರಾಜ್ಯದಲ್ಲಿದ್ದ ಬಿಜೆಪಿ ನಾಯಕರ ಚೆರಿತ್ರೆ ಗಮನಿಸಿ. ಜನರ ಬಾಯಿಯಲ್ಲಿ ಅವರ ಹಗರಣಗಳ ಕಥೆಗಳಿವೆ. ಆರ್‌ಎಸ್‌ಎಸ್‌ನಿಂದ ಅವರೆಲ್ಲ ತರಬೇತಿ ಪಡೆದು ರಾಷ್ಟ್ರ ನಿರ್ಮಾಣ ಮಾಡಿದರೋ, ಜನರ ಹಣ ಲೂಟಿ ಹೊಡೆದು ತಮ್ಮ ಸಾಮ್ರಾಜ್ಯಗಳನ್ನು ನಿರ್ಮಾಣ ಮಾಡಿಕೊಂಡರೋ ಎನ್ನುವುದನ್ನು ತಿಳಿದುಕೊಳ್ಳಿ.

1975ರಲ್ಲಿ ಜನಸಂಘವೂ ಜನತಾ ಪಕ್ಷದ ಮೈತ್ರಿ ಭಾಗವಾಗಿತ್ತು. ಆಗ ಜನಸಂಘದ ನಾಯಕರ ಜತೆ ದೇವೇಗೌಡರೂ ವೇದಿಕೆ ಹಂಚಿಕೊಂಡಿದ್ದರು. ಅಟಲ್, ಅಡ್ವಾಣಿ ಅವರಂತೆ ಗೌಡರೂ ತುರ್ತುಪರಿಸ್ಥಿತಿ ವಿರುದ್ಧ ದನಿಯೆತ್ತಿ ಜೈಲಿಗೆ ಹೋಗಿದ್ದರು. ಆದರೆ, 1975ರ RSSʼಗೂ ಈಗಿನ RSSʼಗೂ ಅಜಗಜಾಂತರ ವ್ಯತ್ಯಾಸವಿದೆ. ಇದು ನಿಮಗಿಂತ ಗೌಡರಿಗೇ ಚೆನ್ನಾಗಿ ಗೊತ್ತು.4/16

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 7, 2021

ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕಂಡರಿಯದ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೇ ಬಿಜೆಪಿ ಸರ್ಕಾರ. ಒಮ್ಮೆ ಹಳೆಯದನ್ನೆಲ್ಲ ನೆನಪು ಮಾಡಿಕೊಳ್ಳಿ. ಅಧಿಕಾರದಲ್ಲಿದ್ದಾಗ ದೇಶದ ಸಂಪತ್ತು, ಜನರ ತೆರಿಗೆ ಹಣ ಲೂಟಿ ಹೊಡೆಯುವ ಕೆಲಸ ಮಾಡಿಲ್ಲ ನಾವು. ನಮ್ಮ ಕುಟುಂಬ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿ ಅವರ ಮನೆಗಳ ಬೆಳಕಾಗಿದೆ. ಇದನ್ನೂ ಓದಿ: ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

ಸ್ವಜನಪಕ್ಷಪಾತ, ಕುಟುಂಬ ರಾಜಕಾರಣವನ್ನ ಸರ್ವಸ್ವ, ಸ್ವಾರ್ಥವನ್ನು ಹಕ್ಕೆಂದು ಭಾವಿಸಿರುವವರಿಗೆ ಸಂಘದ ಸಿದ್ದಾಂತಗಳು ಅರ್ಥವಾಗುವುದಿಲ್ಲ.

ಆರ್‌ಎಸ್‌ಎಸ್‌ ನ ನಿಷ್ಠೆ, ದೇಶ ಭಕ್ತಿ, ಸಂಕಷ್ಟದಲ್ಲಿರುವ ಜನರಿಗೆ ನಿಸ್ವಾರ್ಥ ಸೇವಾ ಮನೋಭಾವ ಹೆಚ್‌ಡಿಕೆ ಅವರಿಗೆ ಅರ್ಥವಾಗುವುದಿಲ್ಲ ಬಿಡಿ.

2/14

— C T Ravi ???????? ಸಿ ಟಿ ರವಿ (@CTRavi_BJP) October 7, 2021

ನನ್ನ ಸೇವಾ ಗುಣ, ನಿಸ್ವಾರ್ಥತೆ ಏನೆಂಬುದು ಜನರಿಗಿಂತ ಒಮ್ಮೆ ಸಂಕಷ್ಟಕ್ಕೆ ಸಿಲುಕಿದ್ದ ನಿಮಗೇ ಚನ್ನಾಗಿ ಗೊತ್ತಿದೆ ಎಂಬುದು ನನ್ನ ಭಾವನೆ. ಅಂದು ಆರೆಸ್ಸೆಸ್ ಮೇಲಿನ ನಿಷ್ಠೆ ನಿಮ್ಮನ್ನು ರಕ್ಷಣೆ ಮಾಡಲಿಲ್ಲ. ಹೆಚ್.ಡಿ.ಕುಮಾರಸ್ವಾಮಿಯ ನಿಸ್ವಾರ್ಥತೆಯ ಫಲಾನುಭವಿ ನೀವು. ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಿ ಸಿ.ಟಿ.ರವಿಯವರೇ.

1975ರಲ್ಲಿ ಜನಸಂಘವೂ ಜನತಾ ಪಕ್ಷದ ಮೈತ್ರಿ ಭಾಗವಾಗಿತ್ತು. ಆಗ ಜನಸಂಘದ ನಾಯಕರ ಜತೆ ದೇವೇಗೌಡರೂ ವೇದಿಕೆ ಹಂಚಿಕೊಂಡಿದ್ದರು. ಅಟಲ್, ಅಡ್ವಾಣಿ ಅವರಂತೆ ಗೌಡರೂ ತುರ್ತುಪರಿಸ್ಥಿತಿ ವಿರುದ್ಧ ದನಿಯೆತ್ತಿ ಜೈಲಿಗೆ ಹೋಗಿದ್ದರು. ಆದರೆ, 1975ರ ಆರ್‌ಎಸ್‌ಎಸ್‌ಗೂ ಈಗಿನ ಆರ್‌ಎಸ್‌ಎಸ್‌ಗೂ ಅಜಗಜಾಂತರ ವ್ಯತ್ಯಾಸವಿದೆ. ಇದು ನಿಮಗಿಂತ ಗೌಡರಿಗೇ ಚೆನ್ನಾಗಿ ಗೊತ್ತು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ಚುನಾವಣಾ ಪ್ರಚಾರದ ವೇಳೆ ನಿಮ್ಮ ತಂದೆ ದೇವೇಗೌಡರು "ಆರ್‌ಎಸ್‌ಎಸ್‌ ಉತ್ತಮ ಸಂಘಟನೆ", 1975ರಲ್ಲಿ ತುರ್ತುಪರಿಸ್ಥಿತಿ ವೇಳೆ ನಾವೆಲ್ಲ ಬಂಧನವಾದಾಗ ಎಲ್‌.ಕೆ.ಅಡ್ವಾಣಿ ಮತ್ತಿತರರು ನಡೆದುಕೊಂಡ ರೀತಿ ನನಗೆ ಮೆಚ್ಚುಗೆಯಾಯಿತು. ಹೀಗಾಗಿ ಆರ್‌ಎಸ್‌ಎಸ್‌ ಹೊಗಳುತ್ತೇನೆ ಎಂದು ಹೇಳಿದ್ದರು.
4/14 pic.twitter.com/TWqt6Qtqei

— C T Ravi ???????? ಸಿ ಟಿ ರವಿ (@CTRavi_BJP) October 7, 2021

ಎಮರ್ಜೆನ್ಸಿ ವೇಳೆ ಜನಸಂಘವಷ್ಟೇ ಅಲ್ಲ, ಅನೇಕ ನಾಯಕರು ಜೈಲಿಗೆ ಹೋಗಿದ್ದರು. ಅಡ್ವಾಣಿ ಅವರು ಬೆಂಗಳೂರು ಜೈಲಿನಲ್ಲೇ ಇದ್ದರು. ಅಲ್ಲಿ ಅಡ್ವಾಣಿ ಅವರೊಂದಿಗಿನ ಒಡನಾಟದಿಂದ ಗೌಡರು ಹಾಗೆ ಹೇಳಿರಬಹುದು. ಎಮರ್ಜೆನ್ಸಿ ಬಳಿಕ ಆರ್‌ಎಸ್‌ಎಸ್‌ ಹೇಗೆ ಬದಲಾಯಿತೆಂಬುದು ಅವರಿಗೆ ತಿಳಿದಿದೆ. ಮೈಸೂರಿನಲ್ಲಿ ಗೌಡರು ಹೇಳಿದ್ದನ್ನೇ ಇವತ್ತು ತಿರುಚಿ ಹೇಳಬೇಡಿ.

ಗೌಡರು ಎಂದೂ ಆರ್‌ಎಸ್‌ಎಸ್‌ ಒಪ್ಪಿಲ್ಲ. ಹಾಗಿದ್ದಿದ್ದರೆ, ಪ್ರಧಾನಿ ಆಗಿದ್ದ ಅವರಿಗೆ ಕಾಂಗ್ರೆಸ್ ʼಕೈʼಕೊಟ್ಟಾಗ ಬೆಂಬಲಕ್ಕೆ ಬಂದ ವಾಜಪೇಯಿ ಅವರ ಆಫರ್ ಒಪ್ಪುತ್ತಿದ್ದರು. ಅಷ್ಟೇ ಏಕೆ, ಬಿಜೆಪಿ ಜತೆ ನಾನು ಸರ್ಕಾರ ರಚಿಸಿದ ಕಾರಣಕ್ಕೆ ಅವರ ಆರೋಗ್ಯ ಹಾಳಾಯಿತು. ಇದು ಆರ್‌ಎಸ್‌ಎಸ್‌ ಬಗ್ಗೆ ಗೌಡರು ಕಾಯ್ದುಕೊಂಡಿರುವ ಅಂತರ. ಅಪ್ರಬುದ್ಧತೆ ಇರುವುದು ಯಾರಿಗೆ?

"ಸರ್ವೇಭವಂತುಸುಖಿನಃ" ಎಂಬ ಶ್ಲೋಕದಂತೆ ಪ್ರತಿಯೊಬ್ಬ ಭಾರತೀಯ ಸುಖೀ ಜೀವನ ಅನುಭವಿಸಲಿ ಎಂಬ ಧ್ಯೇಯ ಸಂಘದ ಸಿದ್ದಾಂತ.

ಕಳೆದ 96 ವರ್ಷಗಳಿಂದ ಸಂಘದ ಶಾಖೆಗಳಲ್ಲಿ ಕೇವಲ ದೇಶಭಕ್ತಿಯ ಸಂಸ್ಕಾರ ಕೊಡುವ ಕೆಲಸವಾಗುತ್ತಿದೆ. ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ, ಸಮಾಜ ಸುಧಾರಣೆ, ರಾಜಕೀಯ ಸೇರಿಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

6/14

— C T Ravi ???????? ಸಿ ಟಿ ರವಿ (@CTRavi_BJP) October 7, 2021

ಸೇವೆ, ಸಂಸ್ಕಾರ ಆರ್‌ಎಸ್‌ಎಸ್‌ ನೀಡುತ್ತಿದೆ ಎನ್ನುತ್ತೀರಿ. ಆದರೆ ಸಮಾಜಕ್ಕೆ ಬೇಕಿರುವುದು ನೆಮ್ಮದಿ, ಶಾಂತಿ, ಮಾಡುವ ಕೈಗಳಿಗೆ ಉದ್ಯೋಗ, ಹಸಿದ ಹೊಟ್ಟೆಗೆ ಅನ್ನ. ಈ ವಿಷಯದಲ್ಲಿ ಆರ್‌ಎಸ್‌ಎಸ್‌ ಏನು ಮಾಡಿದೆ ಎಂಬುದನ್ನು ಜನರ ಮುಂದಿಡಿ. ಬದುಕಿಗೆ ಶಿಕ್ಷಣ ಕೊಡುವುದು ಬಿಟ್ಟು ರಾಷ್ಟ್ರವನ್ನು ಒಡೆಯುವ ರೀತಿ ಮುಗ್ಧ ಮಕ್ಕಳ ಮಿದುಳು ಹಾಳು ಮಾಡುತ್ತಿದ್ದೀರಿ.

ಸೇವೆ, ಸಂಸ್ಕಾರ ಆರ್‌ಎಸ್‌ಎಸ್‌ ಗುತ್ತಿಗೆಯಲ್ಲ. ದೇಶಕ್ಕಾಗಿ ನಿಮ್ಮ ಕೊಡಗೆ, ತ್ಯಾಗ ಏನು? ಇಂದಿರಾಗಾಂಧಿ, ರಾಜೀವ್ ಗಾಂಧಿ ರಾಷ್ಟ್ರಕ್ಕಾಗಿ ಜೀವತ್ಯಾಗ ಮಾಡಿದರು. ನಿಮ್ಮಲ್ಲಿ ಅಂಥವರು ಒಬ್ಬರಿದ್ದಾರಾ? ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಗೇ ಗುಂಡಿಕ್ಕಿದವರು ನೀವು. ನೀವು ಸಮಾಜದ ಉದ್ಧಾರ ಮಾಡುತ್ತೀರಾ? ಇದಕ್ಕೇ ಆರ್‌ಎಸ್‌ಎಸ್‌ ʼವಿಶ್ವಕುಖ್ಯಾತಿʼ ಆಗಿದ್ದು.

ಲಾತೂರ್ ಭೂಕಂಪ ಸಂದರ್ಭ, ಗುಜರಾತಿನ ಭೂಕಂಪದ ವೇಳೆ, ಒರಿಸ್ಸಾ ಚಂಡಮಾರುತದ ಸಂದರ್ಭ, ಸುನಾಮಿ ಅಪ್ಪಳಿಸಿದಾಗ, ಉತ್ತರಾಖಂಡದಲ್ಲಿ ಜಲ ಪ್ರಳಯವಾದಾಗ, ತಮಿಳುನಾಡಿನ ಪ್ರವಾಹವಾದಾಗ, ಕೊಡಗಿನಲ್ಲಿ ಭೂಕುಸಿತವಾದಾಗ ಆರ್‌ಎಸ್‌ಎಸ್‌ ಸೇವಕರು ನಿಸ್ವಾರ್ಥ ಸೇವೆ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕಾರ್ಯಕರ್ತರು ಎಂದೂ ಪ್ರಚಾರ ಬಯಸಿದವರಲ್ಲ.

8/14

— C T Ravi ???????? ಸಿ ಟಿ ರವಿ (@CTRavi_BJP) October 7, 2021

2008-9ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದರು. ಪ್ರವಾಹ ಬಂದು ಜನ ಸಂಕಷ್ಟಕ್ಕೀಡಾದಾಗ ನಾವು, ನಮ್ಮ ಪಕ್ಷದ ಕಾರ್ಯಕರ್ತರು ಬೆಳಗಾವಿ, ಬಾಗಲಕೋಟೆ ಇತರೆ ಜಿಲ್ಲೆಗಳ ಹಳ್ಳಿಗಳಿಗೆ ಹೋಗಿ ನೆರವಾದೆವು. ಪ್ರತಿ ಕನ್ನಡಿಗರೂ ನೆರೆಯಿಂದ ಸರ್ವಸ್ವ ಕಳೆದುಕೊಂಡ ಸಂಸತ್ರರಿಗೆ ಮಿಡಿದರು. ಜತೆಗೆ, ಕೊಡಗಿನಲ್ಲಿ ಮನೆ ಕಟ್ಟಿಸಿದವರು ಯಾರು?

ಉತ್ತರ ಕರ್ನಾಟಕದ ಜನರ ಬದುಕು ಕಣ್ಣೀರ ಕಡಲಾಗಿದ್ದಾಗ ಸರಕಾರದಲ್ಲಿದ್ದ ಮಂತ್ರಿಗಳು, ಶಾಸಕರೆಲ್ಲ ಎಲ್ಲಿದ್ದಿರಿ? ಒಮ್ಮೆ ನೆನಪು ಮಾಡಿಕೊಳ್ಳಿ ಸಿ.ಟಿ.ರವಿಯವರೇ. ಮೈಸೂರಿನ ಸುತ್ತೂರು ಸದನದಲ್ಲಿ ಯೋಗ ಮಾಡಿಕೊಂಡು ನಿಮ್ಮ ಪಕ್ಷದವರೆಲ್ಲ ಆರಾಮ ಸ್ಥಿತಿಯಲ್ಲಿದ್ದರೆ, ನಮ್ಮ ಕಾರ್ಯಕರ್ತರು ವಿರಾಮ ಇಲ್ಲದೆ ನೆರೆಪೀಡಿತರಿಗೆ ನೆರವಾಗುತ್ತಿದ್ದರು.

ಕೊರೊನಾ ಸಂಕಷ್ಟದಲ್ಲಿ ಸ್ವಯಂಸೇವಕರು ತಮ್ಮ ಮನೆಯಲ್ಲಿದ್ದ ಅಕ್ಕಿ-ಬೇಳೆ, ಪಡಿತರಗಳನ್ನು ನಿರ್ಗತಿಕರಿಗೆ ಹಂಚುವ ಉದಾರತೆಯನ್ನು ಮೆರೆದರು.

ಎಲ್ಲಿಯೂ ತಾವು ಮಾಡಿದ ಕಾರ್ಯವನ್ನು ತೊರಿಸಲಿಲ್ಲ. ದೇಶದಲ್ಲಿ ಯಾವುದೇ ಮೂಲೆಯಲ್ಲಿ ಜನ ಸಂಕಷ್ಟದಲ್ಲಿ ಇದ್ದಾರೆ ಎಂದರೆ ಸಾಕು ಸ್ವಯಂಸೇವಕರು ತಮ್ಮ ಪ್ರಾಣವನ್ನು ಪಣವಾಗಿಟ್ಟು ರಕ್ಷಿಸುತ್ತಾರೆ.

10/14

— C T Ravi ???????? ಸಿ ಟಿ ರವಿ (@CTRavi_BJP) October 7, 2021

1996ರಲ್ಲಿ ಗೌಡರು ಪ್ರಧಾನಿ ಆಗಿದ್ದಾಗ ಒಂದು ವಾರ ಈಶಾನ್ಯ ಭಾರತದಲ್ಲಿ ತಂಗಿದ್ದರು. ಆ ಭಾಗದ ಸಮಗ್ರ ಅಭಿವೃದ್ಧಿಗೆ 6.500 ಕೋಟಿ ಪ್ಯಾಕೇಜ್ ಕೊಟ್ಟಿದ್ದನ್ನು ಅಲ್ಲಿನ ಜನ ಈಗಲೂ ಸ್ಮರಿಸುತ್ತಾರೆ. ಈಗ ಅದೇ ಈಶಾನ್ಯದಲ್ಲಿ 2 ರಾಜ್ಯಗಳು ಶತ್ರು ದೇಶಗಳಂತೆ ಹೊಡೆದಾಡುತ್ತಿವೆ. ಇದು ನಿಮ್ಮ ಆಡಳಿತ ವೈಖರಿ. ಗೌಡರಿಂದ ನೀವು ಕಲಿಯುವುದು ಬಹಳ ಇದೆ.

ನೆರೆ, ಕೋವಿಡ್ ಲಾಕ್ʼಡೌನ್ ವೇಳೆಯಲ್ಲಿ ಜೆಡಿಎಸ್ ಪಕ್ಷದಿಂದ 30-40 ಲಾರಿಯಷ್ಟು ಧವಸ-ಧಾನ್ಯ, ಬಟ್ಟೆ, ಜೀವನಾಶ್ಯಕ ವಸ್ತು ತುಂಬಿಕೊಂಡು ಹೋಗಿ ಹಳ್ಳಿಹಳ್ಳಿಯಲ್ಲೂ ಹಂಚಿದ್ದೇವೆ. ನಮ್ಮ ಕಾರ್ಯಕರ್ತರು ಸಂಕಷ್ಟದಲ್ಲಿದ್ದ ಜನರಿಗೆ ಹಗಲಿರಳು ಶ್ರಮಿಸಿ ನೆರವಿನ ಹಸ್ತ ಚಾಚಿದ್ದಾರೆ. ನಾವೂ ಜನಸೇವೆ ಮಾಡಿದ್ದೇವೆ ಎನ್ನುವುದನ್ನು ನೀವು ಮರೆಯಬಾರದು. ʼಸೇವೆʼ ಎಂಬ ಪದ ಆರ್‌ಎಸ್‌ಪೇಟೆಂಟ್ ಅಲ್ಲ. ಔದಾರ್ಯವನ್ನು ಆರ್‌ಎಸ್‌ಎಸ್‌ ಒಂದೇ ಮೆರೆದಿಲ್ಲ. ರಾಜ್ಯದ ಜನರೆಲ್ಲರೂ ಮೆರೆದಿದ್ದಾರೆ. ಇದನ್ನು ಅಲ್ಲಗಳೆಯಬೇಡಿ ಸಿ.ಟಿ.ರವಿಯವರೇ.

ಸ್ವದೇಶಿ ವಸ್ತು ಬಳಕೆ ಬಗ್ಗೆ ಜಾಗೃತಿಗಾಗಿ ಜಾಗರಣಾ ಮಂಚ್‌, ರೈತಪರ ಹೋರಾಟಕ್ಕೆ ಭಾರತೀಯ ಕಿಸಾನ್‌ ಸಂಘ, ಕಾರ್ಮಿಕರ ಹೋರಾಟಕ್ಕೆ ಭಾರತೀಯ ಮಜ್ದೂರ್‌ ಸಂಘ, ಕಾಡು ಜನರ ಹಿತದೃಷ್ಟಿಯಿಂದ ವನ್ಯವಾಸಿ ಕಲ್ಯಾಣ ಆಶ್ರಮಗಳಿದ್ದು, ಬಡವರ ನೆರವಿಗೆ ಆರ್‌ಎಸ್‌ಎಸ್‌ ಬದ್ಧವಾಗಿದೆ.

12/14

— C T Ravi ???????? ಸಿ ಟಿ ರವಿ (@CTRavi_BJP) October 7, 2021

ಆರ್‌ಎಸ್‌ಎಸ್‌ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ. ಇತಿಹಾಸವನ್ನು ತಿರುಚಿ ಮಕ್ಕಳ ಮನಸ್ಸುಗಳನ್ನು ಕೆಡಿಸಿ ಅವರ ಹೃದಯಗಳಲ್ಲಿ ವಿಷಬೀಜ ಬಿತ್ತಲು. ಕಲೆ, ಸಂಸ್ಕೃತಿ, ಸಾಹಿತ್ಯಗಳಲ್ಲಿ ಆರ್‌ಎಸ್‌ಎಸ್‌ ಬದ್ಧತೆ ಏನೆಂಬುದು ಭಾರತಕ್ಕಷ್ಟೇ ಅಲ್ಲ, ವಿಶ್ವಕ್ಕೇ ಗೊತ್ತಿದೆ. ನಾನು ಓದಿ, ಕೇಳಿ, ನೋಡಿ ತಿಳಿದುಕೊಂಡಿದ್ದೇನೆ.

ಸಂಘ ಯಾರನ್ನೂ ಯಾವುದೇ ರಾಜಕೀಯ ಪಕ್ಷ ಸೇರಿ ಎಂದು ಹೇಳುವುದಿಲ್ಲ. ಸಂಘದಲ್ಲಿ ಶಿಸ್ತು ಬದ್ಧ ರಾಷ್ಟ್ರಪ್ರೇಮ ಬೆಳಸಿಕೊಂಡ ಕಾರಣ ವ್ಯಕ್ತಿ ನಿರ್ಮಾಣದ ಜೊತೆ ವ್ಯಕ್ತಿತ್ವ ನಿರ್ಮಾಣವೂ ಆಗುತ್ತಿದೆ.

ಬಿಜೆಪಿಯಲ್ಲಿ ರಾಷ್ಟ್ರ ನಿರ್ಮಾಣವೇ ಧ್ಯೇಯವಾಗಿರುವ ಕಾರಣ ಆರ್‌ಎಸ್‌ಎಸ್‌ ಸ್ವಯಂಸೇವಕರು ಬಿಜೆಪಿಗೆ ಹೋಗುವುದು ಸಹಜ.

14/14

— C T Ravi ???????? ಸಿ ಟಿ ರವಿ (@CTRavi_BJP) October 7, 2021

ರೈತ-ಕಾರ್ಮಿಕರಿಗೆ ಆರ್‌ಎಸ್‌ಎಸ್‌ ಮಾಡಿದ್ದೇನು? ಅನೇಕ ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಅನ್ನದಾತರ ಮೇಲೆ ವಾಹನ ಹತ್ತಿಸಿ ಕೊಲ್ಲಲಾಗಿದೆ. ಈ ಬಗ್ಗೆ ಆರ್‌ಎಸ್‌ಎಸ್‌ ಮೌನ ಏಕೆ? ಕೊರೊನ ಸಂಕಷ್ಟದ ಸಮಯದಲ್ಲಿ ಯಾರ ಜೇಬುಗಳು ತುಂಬುತ್ತಿವೆ ಎಂಬುದು ದೇಶಕ್ಕೆ ಗೊತ್ತಿದೆ. ಸೇವೆ, ಸ್ವದೇಶಿ ತತ್ವಗಳು ಆರ್‌ಎಸ್‌ಎಸ್‌ ಅಲಂಕಾರಕ್ಕೆ ಮಾತ್ರ.

ಆರ್‌ಎಸ್‌ ನಿಂದ ಸ್ವಾಗತ ಪಡೆದುಕೊಳ್ಳುವ ದುಃಸ್ಥಿತಿ ನನಗೆ ಇನ್ನೂ ಬಂದಿಲ್ಲ. ನೀವು ಆರ್‌ಎಸ್‌ ಸಿದ್ದಾಂತದ ಬಗ್ಗೆ ಹೇಳುವುದನ್ನು ನಿಲ್ಲಿಸಿ. ನಾನು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಿ. ನಿಮ್ಮ ಸ್ವಯಂ ಸೇವಕರನ್ನೇ ಮಾತನಾಡಿಸಿ, ಸಂಘವನ್ನು ಹತ್ತಿರದಿಂದ ಕಂಡ ಲೇಖಕರು ಬರೆದಿರುವ ಆ ಪುಸ್ತಕವನ್ನು ಒಮ್ಮೆ ಓದಿ ಸಿ.ಟಿ.ರವಿಯವರೇ.

TAGGED:bjpCT RaviHD Kumaraswaypoliticsrssಆರ್‍ಎಸ್‍ಎಸ್ಎಚ್‍ಡಿ ಕುಮಾರಸ್ವಾಮಿಕರ್ನಾಟಕರಾಜಕೀಯಸಿಟಿ ರವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ – 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
4 minutes ago
Siddaramaiah Modi
Bengaluru City

ನಮ್ಮ ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು – ಮೋದಿ ಎದುರೇ ಸಿದ್ದರಾಮಯ್ಯ ‘ಕ್ರೆಡಿಟ್‌’ ಕ್ಲೈಮ್

Public TV
By Public TV
4 minutes ago
PM Modi In Bengaluru
Bengaluru City

ಆಪರೇಷನ್ ಸಿಂಧೂರ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ: ಮೋದಿ

Public TV
By Public TV
21 minutes ago
Narendra Modi
Bengaluru City

ಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಮೋದಿ ಅಭಿನಂದನೆ

Public TV
By Public TV
24 minutes ago
M Lakshman
Districts

ಪ್ರತಾಪ್‌ ಸಿಂಹ ಮೊಬೈಲ್‌ SITಗೆ ಕೊಟ್ರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್‌

Public TV
By Public TV
37 minutes ago
Mantralaya Aradhana Mahotsava 3
Districts

ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ – ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?