ಬೆಂಗಳೂರು: ಮಾಂಸಹಾರ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ (C.T.Ravi) ವಾವದವನ್ನ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಈಗ ಮೌನವಾಗಿರುವುದಕ್ಕೆ ಅವರು ಗರಂ ಆಗಿದ್ದಾರೆ.
Advertisement
ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ” ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ
Advertisement
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಬೇರೆಯವರ ದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.
Advertisement
ನಾನು ಮೀನು ತಿಂದು ದೇವಸ್ಥಾನಕ್ಕೆ (Temple) ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ರಾಜ್ಯ ಬಿಜೆಪಿ (BJP) ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ.
Advertisement
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ರಾಜ್ಯ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಪಾಲಿಕೆಯಲ್ಲಿ ಹೈಡ್ರಾಮಾ – ಪರಸ್ಪರ ಹೊಡೆದಾಡಿಕೊಂಡ ಬಿಜೆಪಿ, ಆಪ್ ಸದಸ್ಯರು
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k