ನವದೆಹಲಿ: ಪುಲ್ವಾಮಾ ದಾಳಿ ನಡೆದ ಬೆನ್ನಲ್ಲೇ ಪಾಕಿಸ್ತಾನ ಪರಮಾಪ್ತ ರಾಷ್ಟ ಸ್ಥಾನವನ್ನು ರದ್ದು ಪಡಿಸಿದ್ದ ಭಾರತ, ಈಗ ಮತ್ತೊಂದು ಶಾಕ್ ನೀಡಿದೆ.
ತಕ್ಷಣ ಅನ್ವಯ ಆಗುವಂತೆ ಪಾಕಿಸ್ತಾನ ಉತ್ಪನ್ನಗಳ ಮೇಲೆ ಶೇ. 200 ರಷ್ಟು ಆಮದು ಸುಂಕವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ನೀಡಿದೆ. ಈ ಮೂಲಕ ಪಾಕಿಸ್ತಾನ ಆರ್ಥಿಕತೆಗೆ ಪೆಟ್ಟು ನೀಡಿದೆ. ಅಕ್ಕಿ, ತರಕಾರಿ, ಪೀಠೋಪಕರಣಗಳು, ಸಿಮೆಂಟ್, ಚರ್ಮದ ಸರಕು, ಜವಳಿ ಬಟ್ಟೆ, ವಿದ್ಯುತ್ ವಸ್ತುಗಳು, ಶಸ್ತ್ರಚಿಕಿತ್ಸೆ ವಸ್ತುಗಳು ಸೇರಿ ಹಲವು ವಸ್ತುಗಳನ್ನು ಪಾಕಿಸ್ತಾನದಿಂದ ಭಾರತ ಆಮದು ಮಾಡಿಕೊಳ್ಳುತ್ತಿದೆ.
Advertisement
ಈ ಕುರಿತು ಕೇಂದ್ರ ಸಚಿವ ಅರುಣ್ ಜೇಟ್ಲಿ ಟ್ವಿಟ್ಟರಿನಲ್ಲಿ ಮಾಹಿತಿ ನೀಡಿದ್ದು, ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟದ ಸ್ಥಾನವನ್ನು ಹಿಂಪಡೆಯಲಾಗಿದ್ದು. ಇದರೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ರಫ್ತು ಆಗುವ ಎಲ್ಲಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಶೇ. 200 ರಷ್ಟು ಹೆಚ್ಚಳ ಮಾಡಿದೆ ಎಂದು ಜೇಟ್ಲಿ ಬರೆದುಕೊಂಡಿದ್ದಾರೆ.
Advertisement
India has withdrawn MFN status to Pakistan after the Pulwama incident. Upon withdrawal, basic customs duty on all goods exported from Pakistan to India has been raised to 200% with immediate effect. #Pulwama
— Arun Jaitley (@arunjaitley) February 16, 2019
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv