ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸರ್ಕಾರದ ಮುಂದೆ ಸಾಲು ಸಾಲು ಸವಾಲುಗಳಿವೆ. ಪ್ರಮುಖವಾಗಿ ರೈತರ ಸಾಲ ಮನ್ನಾ ಮಾಡಬೇಕಿದೆ. ಹೀಗಾಗಿ ಆರ್ಥಿಕ ಶಿಸ್ತು ಮೈಗೂಡಿಸಿಕೊಳ್ಳಲು ಕುಮಾರಸ್ವಾಮಿ ಮುಂದಾಗಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಅನಗತ್ಯ ವೆಚ್ಚಗಳನ್ನು ತಗ್ಗಿಸಿ ಆರ್ಥಿಕ ಭದ್ರತೆಯನ್ನು ಕಾಯ್ದುಕೊಳ್ಳಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ತುರ್ತು ಸಂದರ್ಭ ಹೊರತುಪಡಿಸಿ ವಿಶೇಷ ವಿಮಾನ ಪ್ರಯಾಣಕ್ಕೆ ಸ್ವತಃ ಬ್ರೇಕ್ ಹಾಕಿಕೊಂಡಿರುವ ಸಿಎಂ ಹೆಚ್‍ಡಿಕೆ ಸಾಮಾನ್ಯ ವಿಮಾನದಲ್ಲೇ ಪ್ರಯಾಣಿಸಲು ತೀರ್ಮಾನ ಮಾಡಿದ್ದಾರೆ.
Advertisement
ಅಷ್ಟೇ ಅಲ್ಲದೇ ಮುಖ್ಯಮಂತ್ರಿಗಳ ಬೆಂಗಾವಲು ಪಡೆಗೂ ಕಡಿವಾಣ ಹಾಕಿಸಿರುವ ಸಿಎಂ ಅನಗತ್ಯ ಪೊಲೀಸ್ ಸಿಬ್ಬಂದಿ, ವಾಹನಗಳ ಹಿಂಬಾಲಿಸುವುದು ಬೇಡ ಎಂಬ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ವಿಧಾನಸೌಧ ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ಅನಗತ್ಯ ವಾಹನಗಳ ಖರೀದಿ, ಸಚಿವರ ಕೊಠಡಿ ಮತ್ತು ವಸತಿ ಗೃಹಗಳ ನವೀಕರಣಕ್ಕೆ ಕಡಿವಾಣ ಹಾಕಿದ್ದಾರೆ. ಅಲ್ಪ ಮಿತಿಯಲ್ಲೇ ಸಣ್ಣಪುಟ್ಟ ಕೆಲಸಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.
Advertisement
ರಾಜ್ಯ ಸರ್ಕಾರದಲ್ಲಿ ಅನಗತ್ಯ ವೆಚ್ಚಗಳನ್ನು ತಗ್ಗಿಸಿ ಆರ್ಥಿಕ ಭದ್ರತೆಯನ್ನು ಕಾಯ್ದುಕೊಳ್ಳಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.ಈ ಸಂಬಂಧವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿರುವ ಮುಖ್ಯಮಂತ್ರಿಗಳು, ಸಚಿವಾಲಯ, ವಿವಿಧ ಇಲಾಖೆಗಳು, ಅಧೀನ ಸಂಸ್ಥೆಗಳು ಹೊಸ ವಾಹನಗಳ ಖರೀದಿ ಪುನರ್ ಪರಿಶೀಲಿಸಲು ತಿಳಿಸಿದ್ದಾರೆ
— CM of Karnataka (@CMofKarnataka) June 3, 2018