ಬೆಂಗಳೂರು: ರಾಜ್ಯ ಸರ್ಕಾರ ಹಾಲಿನ (Milk) ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: IC 814: The Kandahar Hijack : ಮುಸ್ಲಿಂ ಬದಲು ಹಿಂದೂಗಳ ಹೆಸರು | ಕೇಂದ್ರದ ಕ್ಲಾಸ್, ಅಪಹರಣಕಾರರ ನಿಜವಾದ ಹೆಸರು ಹಾಕಲು ಒಪ್ಪಿಕೊಂಡ ನೆಟ್‌ಫ್ಲಿಕ್ಸ್
ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ @INCKarnataka ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ.
ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 3, 2024
ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿವೆ. (ಹೊಸ ಖರೀದಿ ದರ 30.50 ರೂ. ನಿಂದ 29 ರೂ.ಗೆಕ್ಕೆ ಕುಸಿದಿದೆ). ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ ಎಂದು ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ಸಾಲವೆಂಬ ಪರ್ವತಗಳ ಸುಳಿಯಲ್ಲಿ ಹಿಮಾಚಲ – ಆರ್ಥಿಕ ಅಪಾಯದಲ್ಲಿರುವ ರಾಜ್ಯಗಳು ಯಾವುವು? ತಜ್ಞರು ಸೂಚಿಸುವ ಪರಿಹಾರವೇನು?
ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.