ನವದೆಹಲಿ: ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಸ್ಥಿರವಾಗಿದ್ದರೆ ಮತ್ತು ಮುಂದಿನ ತ್ರೈಮಾಸಿಕದಲ್ಲಿ ಈ ಸಂಸ್ಥೆಗಳು ಉತ್ತಮವಾಗಿದ್ದರೆ, ಪೆಟ್ರೋಲ್ ಮತ್ತು ಡೀಸೆಲ್ (Petrol Diesel Price) ಬೆಲೆ ಇಳಿಕೆ ಮಾಡಬಹುದು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಹೇಳಿದ್ದಾರೆ.
ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರವು 2022ರ ಏಪ್ರಿಲ್ನಿಂದ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ನೋಡಿಕೊಂಡಿದೆ. ಆ ಮೂಲಕ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ಅನುದಾನ
Advertisement
Advertisement
ಮೋದಿ ಸರ್ಕಾರದ ಒಂಬತ್ತು ವರ್ಷ ಪೂರೈಸಿರುವ ಕುರಿತು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಫೇಲ್ ಮತ್ತು ಇತರ ವಿಷಯಗಳ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗಳಿಗಾಗಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರ ಹೇಳಿಕೆಗಳು ಸುಳ್ಳು ಎಂದು ಈಗಾಗಲೇ ಸಾಬೀತಾಗಿದೆ ಎಂದು ಮಾತನಾಡಿದ್ದಾರೆ.
Advertisement
ಮೋದಿ ಸರ್ಕಾರದ ನೇತೃತ್ವದಲ್ಲಿ ಮೂಲಸೌಕರ್ಯ ವಲಯದಲ್ಲಿ ಬೆಳವಣಿಗೆಯಾಗಿದೆ. ಇತರರನ್ನು ದೂಷಿಸಲು ಕೆಲವರು ಯಾವಾಗಲೂ ಎದುರು ನೋಡುತ್ತಿರುತ್ತಾರೆ ಎಂದು ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸುತ್ತೇನೆ: ಪಟ್ಟು ಬಿಡದ ಸಾಕ್ಷಿ ಮಲಿಕ್
Advertisement
ಬೆಲೆ ನಿಗದಿ ವಿಷಯವು ಕ್ರಿಯಾತ್ಮಕ ವಿಷಯವಾಗಿದೆ. ಸರ್ಕಾರವು ತನ್ನ ಒಂಬತ್ತು ವರ್ಷಗಳ ಅವಧಿಯಲ್ಲಿ ಜನರಿಗೆ ಸಹಾಯ ಮಾಡಲು ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಂಡಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ವ್ಯಾಟ್ ಅನ್ನು ಕಡಿಮೆ ಮಾಡದೇ ಬಿಜೆಪಿ ಆಡಳಿತವಿರುವ ಸರ್ಕಾರಗಳಿಗಿಂತ ಹೆಚ್ಚಿನ ಬೆಲೆಗೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಮಾರಾಟ ಮಾಡುತ್ತಿವೆ. ಆದರೂ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.