ತನ್ನ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ನವೀನ್ ಗಿರಿ ಎನ್ನುವವರ ನರ ಕಟ್ ಮಾಡಿ, ಬೀದಿಗೆ ಬಿಸಾಕಿ ಎಂದು ಉರ್ಫಿ ಜಾವೇದ್ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಉರ್ಫಿಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಗೋರೆಗಾಂವ್ ಪೊಲೀಸರು ಈಗಾಗಲೇ ಬಂಧಿಸಿದ್ದು, ಸೆಕ್ಷನ್ 354, 509, 506 ಹಾಗೂ 354 (ಡಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ಮೊನ್ನೆಯಷ್ಟೇ ಉರ್ಫಿ ಜಾವೇದ್ ಅವರನ್ನು ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಸಾರ್ವಜನಿಕವಾಗಿ ಅಶ್ಲೀಲ ಉಡುಪಿನಲ್ಲಿ ದುಬೈನಲ್ಲಿ ಅವರು ಚಿತ್ರೀಕರಣ ಮಾಡುತ್ತಿದ್ದಾಗ ಯುಎಇ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವುದು ದೃಢವಾಗಿದೆ. ಪ್ರವಾಸಕ್ಕೆಂದು ತೆರಳಿದ್ದ ಉರ್ಫಿಯು ಸಾರ್ವಜನಿಕವಾಗಿ ಅರೆಬರೆ ಬಟ್ಟೆಯನ್ನು ಹಾಕಿಕೊಂಡಿದ್ದರು ಎಂದಿದ್ದಾರೆ ದುಬೈ ಪೊಲೀಸರು. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ
ಈ ವಿಚಾರವಾಗಿ ಮಾಧ್ಯಮಗಳು ಉರ್ಫಿಯನ್ನು ಸಂಪರ್ಕಿಸಿದರೂ, ಈ ಕುರಿತು ಅವರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ದುಬೈನಲ್ಲಿ ಈ ರೀತಿಯ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಚಿತ್ರೀಕರಣ ಮಾಡಲು ಅವಕಾಶವಿಲ್ಲದ ಕಾರಣ ಈ ರೀತಿಯಲ್ಲಿ ಅವರು ಸಂಕಷ್ಟ ಎದುರಿಸಬೇಕಾಗಿದೆ. ಸದ್ಯ ಉರ್ಫಿ ಪೊಲೀಸರ ವಶದಲ್ಲಿ ಇದ್ದು, ಅಲ್ಲಿನ ಕಾನೂನಿಗೆ ತಲೆಬಾಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ನಿನ್ನೆಯಷ್ಟೇ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿತ್ತು. ಆಸ್ಪತ್ರೆಯ ಬೆಡ್ ಮೇಲಿಂದಲೇ ತೆಗೆದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ತಮಗಿರುವ ಸಮಸ್ಯೆ ಬಗ್ಗೆಯೂ ಅವರು ಹೇಳಿಕೊಂಡಿದ್ದರು. ಅದರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದರು. ದುಬೈನಲ್ಲೇ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ.
ಇತ್ತೀಚಿನ ದಿನಗಳಲ್ಲಿ ಉರ್ಫಿ ಜಾವೇದ್ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಚಿತ್ರ ವಿಚಿತ್ರ ಬಟ್ಟೆ ಹಾಕುವ ಕಾರಣದಿಂದಾಗಿಯೇ ಅವರ ಮೇಲೆ ದೂರನ್ನು ನೀಡಿದ್ದಾರೆ. ಕೆಲ ಪ್ರಕರಣಗಳು ಅವರನ್ನು ಬೆನ್ನತ್ತಿ ಕಾಡುತ್ತಿವೆ. ಇವುಗಳಿಂದ ತಪ್ಪಿಸಿಕೊಳ್ಳಲು ಅವರು ಆಸ್ಪತ್ರೆಯ ನಾಟಕ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಸ್ವತಃ ಉರ್ಫಿ ಅವರೇ ಹೇಳಿರುವಂತೆ ಅವರಿಗೆ ‘ಲಾರಿಂಜೈಟಿಸ್’ ತೊಂದರೆ ಆಗಿದೆಯಂತೆ.
ಮನುಷ್ಯನ ಧ್ವನಿ ಪೆಟ್ಟಿಗೆಗೆ ತಗಲುವ ಸೋಂಕಿಗೆ ಲಾರಿಂಜೈಟಿಸ್ ಎಂದು ಕರೆಯುತ್ತಾರೆ. ಉರ್ಫಿಯ ಗಂಟಲಿಗೆ ಈ ಸೋಂಕು ತಗುಲಿದೆಯಂತೆ. ಅಷ್ಟಕ್ಕೆ ಭಯ ಪಟ್ಟುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಿಕಿತ್ಸೆಯನ್ನೂ ಅವರು ಪಡೆದಿದ್ದಾರೆ. ಆಸ್ಪತ್ರೆಯಲ್ಲಿ ಇರುವಾಗಲೇ ವಿಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಕ್ಕಾಗಿ ಕೆಲವರು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ.