ಚಿಕ್ಕಬಳ್ಳಾಪುರ: ಖಾಸಗಿ ಕಂಪನಿಗೆ ಸೇರಿದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ ಪ್ರಕರಣವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು (Doddaballapura Rural Police) ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸೋಮಶೇಖರ್, ಚಂದ್ರಶೇಖರ್, ಧನುಷ್, ನಾಗಭೂಷಣ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆರೋಪಿಗಳಿಂದ (Accused) ಸುಮಾರು 80 ಲಕ್ಷ ರೂ. ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನ (Cutting Tools) ಪೊಲೀಸರು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಅರಣ್ಯ ಸಿಬ್ಬಂದಿ ನಾಪತ್ತೆಯಾಗಿದ್ದಾರೆ, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ಪರಿಹಾರ: ಶಾಸಕ ಮಂಜುನಾಥ್

ದೊಡ್ಡಬಳ್ಳಾಪುರದಲ್ಲಿರುವ ವೈಜಿ ಖಾಸಗಿ ಕಂಪನಿಯಲ್ಲಿ ಆರೋಪಿಗಳು ಈ ಹಿಂದೆ ಉದ್ಯೋಗಿಗಳಾಗಿ ಕೆಲಸ ಮಾಡುತ್ತಿದ್ದರು. ಇದೇ ಸಂದರ್ಭವನ್ನ ಬಳಸಿಕೊಂಡು ಹಂತ ಹಂತವಾಗಿ ಕಂಪನಿಯ ಕಟ್ಟಿಂಗ್ ಟೂಲ್ಸ್‌ಗಳನ್ನ ಕಳ್ಳತನ ಮಾಡಿರುವ ಆರೋಪ ಕೇಳಿಬಂದಿದೆ.
2025ನೇ ಸಾಲಿನ ಆಡಿಟ್ ವೇಳೆ ಕಂಪನಿಯ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಬಳಿಕ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಂಪನಿ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ತನಿಖೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಅವರಿಂದ 80 ಲಕ್ಷ ರೂ. ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ
