Connect with us

Latest

ನಮಗೆ ಬಿಜೆಪಿ ಜೊತೆ ಸಂಪರ್ಕವಿದೆ – ರಾಹುಲ್‌ ವಿರುದ್ಧ ಕಪಿಲ್‌ ಸಿಬಲ್‌ ಗರಂ

Published

on

ನವದೆಹಲಿ: ಅಧ್ಯಕ್ಷರನ್ನು ನೇಮಿಸುವ ಸಂಬಂಧ ಆರಂಭಗೊಂಡಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಹಿರಿಯ ನಾಯಕರ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಕಪಿಲ್‌ ಸಿಬಲ್‌ ಟ್ವಿಟ್ಟರ್‌ನಲ್ಲಿ ಗರಂ ಆಗಿ ಟ್ವೀಟ್‌ ಮಾಡಿದ್ದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಟ್ವೀಟ್‌ ಮಾಡಿದ ಅವರು, ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು ಹೇಳುತ್ತಾರೆ. ಆದರೆ ನಾವು ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿ ಪರವಾಗಿ ಹೇಳಿಕೆ ನೀಡಿಲ್ಲ

ರಾಜಸ್ಥಾನ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಬಿಜೆಪಿ ಸರ್ಕಾರವನ್ನು ಉರುಳಿಸಿ ಮಣಿಪುರದಲ್ಲಿ ಹಾಲಿ ಪಕ್ಷವನ್ನು ತರುವಲ್ಲಿ ನೆರವಾದೆ. ಆದರೂ ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು  ಬರೆದು ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಕೈ ಬಂಡಾಯದ ಮಧ್ಯೆ ರಾಹುಲ್ ಬೆನ್ನಿಗೆ ನಿಂತ ರಮ್ಯಾ

ಕಪಿಲ್‌ ಸಿಬಲ್‌ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಬಹಿರಂಗವಾಗಿ ಟ್ವೀಟ್‌ ಮಾಡುವುದು ಇದು ಮೊದಲೆನಲ್ಲ. ರಾಜಸ್ಥಾನ ಸರ್ಕಾರದಲ್ಲಿನ ಭಿನ್ನಮತದ ಬಗ್ಗೆ ಕಪಿಲ್ ಸಿಬಲ್‌ ಬೇಸರಗೊಂಡು ಟ್ವೀಟ್ ಮಾಡಿದ್ದರು. ನಮ್ಮ ಪಕ್ಷದ ಬಗ್ಗೆ ನನಗೆ ಆತಂಕವಾಗುತ್ತಿದೆ. ನಮ್ಮ ಲಾಯಗಳಿಂದ(ಕುದುರೆಗಳನ್ನು ಕಟ್ಟಿ ಹಾಕುವ ಜಾಗ) ಕುದುರೆಗಳು ಹೊರ ಬಂದ ನಂತರ ನಾವು ಎಚ್ಚೆತ್ತುಕೊಳ್ಳುವುದೇ ಎಂದು ಪ್ರಶ್ನಿಸಿದ್ದರು.

ರಾಹುಲ್‌ ಗಾಂಧಿ ಹೇಳಿದ್ದು ಏನು?
ಕೋವಿಡ್‌ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ ಎಂದು ರಾಹುಲ್‌ ಆಕ್ಷೇಪ ವ್ಯಕ್ತಪಡಿಸಿದರು. ಸೋನಿಯಗಾಂಧಿ ಗೆ ಆರೋಗ್ಯ ಸಮಸ್ಯೆ ಇದೆ. ಅವರು ಆಸ್ಪತ್ರೆ ದಾಖಲಾದ ವೇಳೆ ಪತ್ರ ಬರೆಯುವುದು ಎಷ್ಟು ಸರಿ? ಕಾಂಗ್ರೆಸ್‌ ಕೆಲ ಹಿರಿಯ ನಾಯಕರು ಬಿಜೆಪಿ ಜೊತೆ ಸೇರಿಕೊಂಡು ಈಗ ನಮ್ಮ ವಿರುದ್ಧವೇ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *