ನವದೆಹಲಿ: ದೆಹಲಿ ಸರ್ಕಾರದಿಂದ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಕ್ಕೆ, ʼನೀವು ದೆಹಲಿ ರಾಜ್ಯವನ್ನು ಪ್ರತಿನಿಧಿಸಿದ್ರಾʼ ಎಂದು ಪ್ರಶ್ನಿಸಿದ್ದ ಆಮ್ ಆದ್ಮಿ ಪಕ್ಷದ ಶಾಸಕನಿಗೆ ಸರ್ಟಿಫಿಕೇಟ್ ತೋರಿಸುವ ಮೂಲಕ ಕುಸ್ತಿಪಟು ದಿವ್ಯಾ ಕಕ್ರನ್ ತಿರುಗೇಟು ನೀಡಿದ್ದಾರೆ.
61ನೇ ರಾಷ್ಟ್ರೀಯ ಮಹಿಳಾ ಚಾಂಪಿಯನ್‌ಶಿಪ್‌ನಲ್ಲಿ ದೆಹಲಿಯನ್ನು ಪ್ರತಿನಿಧಿಸಿದ್ದಾರೆ ಎಂದು ತಿಳಿಸಿರುವ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಪ್ರಮಾಣಪತ್ರವನ್ನು ದಿವ್ಯಾ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ʼನಾನು 2011 ರಿಂದ 2017 ರವರೆಗೆ ದೆಹಲಿಯನ್ನು ಪ್ರತಿನಿಧಿಸಿದ್ದೇನೆ. ಇದು ದೆಹಲಿ ರಾಜ್ಯದಿಂದ ನನ್ನ ಪ್ರಮಾಣಪತ್ರವಾಗಿದೆ. ನೀವು ಇನ್ನೂ ನನ್ನನ್ನು ನಂಬದಿದ್ದರೆ, ನಾನು 17 ಚಿನ್ನದ ಪದಕಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡುತ್ತೇನೆ ಎಂದು ಎಎಪಿ ಶಾಸಕ ಸೌರಭ್ ಭಾರಧ್ವಾಜ್ ಅವರಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ
Advertisement
2011 se 2017 tak me delhi se khelti thi ye raha certificate delhi sate ka !
Ager apko abhi bhi yakin nahi to delhi sate se 17 Gold h mere vo certificate bhi upload karu https://t.co/0PXYp7NWR0 pic.twitter.com/H7dwTWsSx7
— Divya kakran (@DivyaWrestler) August 9, 2022
Advertisement
ನಡೆದಿದ್ದೇನು?
ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿಪಟು ದಿವ್ಯಾ ಕಕ್ರನ್ ಅವರು ದೆಹಲಿ ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಕಳೆದ 20 ವರ್ಷಗಳಿಂದ ದೆಹಲಿಯಲ್ಲಿ ವಾಸವಾಗಿದ್ದು, ಸ್ಪರ್ಧೆಗಾಗಿ ಅಭ್ಯಾಸ ಮಾಡುತ್ತಿದ್ದೆ. ಆದರೆ ಈವರೆಗೂ ನನಗೆ ದೆಹಲಿ ಸರ್ಕಾರದಿಂದ ಯಾವುದೇ ಸಹಾಯ ಸಿಗಲಿಲ್ಲ ಎಂದು ನೊಂದು ನುಡಿದಿದ್ದರು. ಅಲ್ಲದೇ ದೆಹಲಿಯವರೇ ಆಗಿದ್ದರೂ ಬೇರೆ ರಾಜ್ಯದ ಪರ ಆಡುತ್ತಿರುವ ಇತರ ಆಟಗಾರರನ್ನು ಗೌರವಿಸುವ ರೀತಿಯಲ್ಲಿಯೇ ನನ್ನನ್ನು ಗೌರವಿಸಬೇಕೆಂಬುದು ಟ್ವೀಟ್ ಮೂಲಕ ಮನವಿ ಮಾಡಿದ್ದರು.
Advertisement
ಈ ವೇಳೆ ದಿವ್ಯಾ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ವಕ್ತಾರ ಹಾಗೂ ಶಾಸಕ ಸೌರಭ್ ಭಾರದ್ವಾಜ್ ಅವರು, ಸಹೋದರಿ, ಇಡೀ ದೇಶವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ. ಆದರೆ ನೀವು ದೆಹಲಿಯ ಪರ ಆಡಿದ್ದು ನನಗೆ ನೆನಪಿಲ್ಲ. ಆದರೆ ನೀವು ಉತ್ತರ ಪ್ರದೇಶವನ್ನು ಪ್ರತಿನಿಧಿಸಿ ಆಡಿದ್ದೀರಿ. ಆದರೆ ಒಬ್ಬ ಆಟಗಾರ ದೇಶಕ್ಕೆ ಸೇರಿದವನು. ಯೋಗಿ ಆದಿತ್ಯನಾಥ್ ಅವರಿಂದ ನೀವು ಯಾವುದೇ ಪ್ರಶಸ್ತಿಗಳನ್ನು ನಿರೀಕ್ಷಿಸುವುದಿಲ್ಲ. ದೆಹಲಿ ಸಿಎಂ ನಿಮ್ಮ ಮನವಿಗೆ ಸ್ಪಂದಿಸುತ್ತಾರೆಂಬ ಭರವಸೆ ನನಗಿದೆ ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: Well Done Girls: ಗೋಲ್ಡ್ ಜಸ್ಟ್ ಮಿಸ್ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು
Advertisement
ದೆಹಲಿ ಸರ್ಕಾರವು ದೇಶದ ಎಲ್ಲಾ ಕ್ರೀಡಾಪಟುಗಳನ್ನು ಗೌರವಿಸುತ್ತದೆ. ಅವರ ಉಜ್ವಲ ಭವಿಷ್ಯಕ್ಕಾಗಿ ಹಾರೈಸುತ್ತದೆ. ದಿವ್ಯಾ ಕಕ್ರನ್ ಸದ್ಯ ಉತ್ತರಪ್ರದೇಶ ಪರ ಆಡುತ್ತಿದ್ದಾರೆ. ಅವರು ದೆಹಲಿಯ ಪರವಾಗಿ ಆಡಿದ್ದರೆ ಅಥವಾ ದೆಹಲಿಯಲ್ಲಿ ಯಾವುದೇ ಕ್ರೀಡಾ ಯೋಜನೆಯ ಭಾಗವಾಗಿದ್ದರೆ ಅಥವಾ ಅಂತಹ ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸಿದ್ದರೆ, ರಾಜ್ಯ ಸರ್ಕಾರ ಖಂಡಿತವಾಗಿಯೂ ಅದನ್ನು ಪರಿಶೀಲಿಸುತ್ತದೆ ಎಂದು ಸಹ ವಕ್ತಾರ ಪ್ರತಿಕ್ರಿಯಿಸಿದ್ದರು.