ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್‌ನ ಗುಂಪು ಹಂತದ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಕೈಚೆಲ್ಲಿದ್ದ ಭಾರತ ಫೈನಲ್ಸ್‌ನಲ್ಲಿ ಮಲೇಷ್ಯಾ ವಿರುದ್ಧ 1-3 ಅಂತರದಲ್ಲಿ ಪರಾಭವಗೊಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.
ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಮಲೇಷ್ಯಾದ ಕೆಳಕ್ರಮಾಂಕದ ಆಟಗಾರ ತ್ಸೆಯಾಂಗ್ ಜಿ-ವಿರುದ್ಧ ಸೋಲು ಅನುಭವಿಸಿದ್ದು, ತಂಡದ ಸೋಲಿಗೆ ಕಾರಣವಾಯಿತು. ಅಲ್ಲದೇ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕೂಡ ಸೋಲನುಭವಿಸಿದರು. ಇದರಿಂದ ತಂಡ 2-0 ಯಿಂದ ಹಿನ್ನಡೆ ಕಾಯ್ದುಕೊಂಡಿತು. ಇದನ್ನೂ ಓದಿ: ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ 8ನೇ ಪದಕ – ವಿಕಾಸ್ ಠಾಕೂರ್‌ಗೆ ಬೆಳ್ಳಿ
Advertisement
Advertisement
ಮಹಿಳಾ ಸಿಂಗಲ್ಸ್‌ನಲ್ಲಿ ಮಲೇಷ್ಯಾದ ಗೋಹ್ ಜಿನ್ ವೀ ಅವರು, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧುಗೆ ಸುಲಭ ತುತ್ತಾದರು. ಮೊದಲು ನಡೆದ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ, ಒಲಿಂಪಿಕ್ ಕಂಚಿನ ಪದಕ ವಿಜೇತ ಜೋಡಿಯಾದ ಮಲೇಷ್ಯಾದ ಟೆಂಗ್ ಫಾಂಗ್ ಆರನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಎದುರಿಸಿತು. ಕಠಿಣ ಸವಾಲು ಒಡ್ಡಿದ ಚಿಯಾ ಸೋಹ್ ಜೋಡಿ ಭಾರತದ ಎದುರು 21-18, 21-15 ನೇರ ಸೆಟ್‌ಗಳಿಂದ ಪಂದ್ಯ ಜಯಿಸಿತು. ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು.
Advertisement
Advertisement
ಸಿಂಗಲ್ಸ್‌ನಲ್ಲಿ ಸಿಂಧುಗೆ ಜಯ: ನಂತರ ನಡೆದ ಮಹಿಳೆಯರ ಸಿಂಗಲ್ಸ್ನಲ್ಲಿ ಪಿವಿ ಸಿಂಧು, ಗೋಹ್ ಜಿನ್ ವೀ ಸವಾಲು ಎದುರಿಸಿದರು. 22-20, 21-17 ನೇರ ಸೆಟ್‌ಗಳಿಂದ ಸಿಂಧು ಜಯಿಸುವ ಮೂಲಕ 1-1 ರಲ್ಲಿ ಸಮಬಲ ಸಾಧಿಸಿದರು. ವಿಶ್ವ ಕ್ರಮಾಂಕದಲ್ಲಿ 40ನೇ ಸ್ಥಾನದಲ್ಲಿದ್ದ ಮಲೇಷ್ಯಾದ ಗೋಹ್, 7ನೇ ಕ್ರಮಾಂಕದಲ್ಲಿರುವ ಸಿಂಧುಗೆ ಕಠಿಣ ಸವಾಲು ಒಡ್ಡಿದರು. ಇದನ್ನೂ ಓದಿ: ಇಂದು ಸುವರ್ಣ ದಿನ- ಟೇಬಲ್ ಟೆನಿಸ್‍ನಲ್ಲಿ ಚಿನ್ನ ಗೆದ್ದ ಭಾರತ
ಶ್ರೀಕಾಂತ್‌ಗೆ ಸೋಲು: ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ 14 ನೇ ಶ್ರೇಯಾಂಕಿತ, ಭಾರತದ ಅಗ್ರ ಶೆಟ್ಲರ್ ಕಿಡಂಬಿ ಶ್ರೀಕಾಂತ್ ತ್ಸೆಯಾಂಗ್ ಜಿ ವಿರುದ್ಧ ಸೋತು ಶಾಕ್ ನೀಡಿದರು. 21-19, 6-21, 21-16 ಮೂರು ಸೆಟ್‌ಗಳಲ್ಲಿ ನಡೆದ ಆಟದಲ್ಲಿ ತ್ಸೆಯಾಂಗ್ ಜಿ ಗೆಲುವು ಸಾಧಿಸಿದರು.
The @birminghamcg22 silver medallists in the badminton mixed team event: #TeamIndia ????????????#EkIndiaTeamIndia | #B2022 | #CWG2022 pic.twitter.com/UohV61YNu2
— Team India (@WeAreTeamIndia) August 2, 2022
ನಿರ್ಣಾಯಕ ಪಂದ್ಯವಾದ ಮಹಿಳೆಯರ ಮಿಶ್ರ ಡಬಲ್ಸ್‌ನಲ್ಲಿ ವಿಶ್ವದ 11ನೇ ಶ್ರೇಯಾಂಕದ ಮಲೇಷ್ಯಾ ಜೋಡಿಯಾದ ಥಿನಾ ಮುರಳೀಧರನ್ ಮತ್ತು ಕೂಂಗ್‌ಲೆ ಪರ್ಲಿ ತಾನ್ ಭಾರತದ ಜೋಡಿಯಾದ ಗಾಯತ್ರಿ ಗೋಪಿಚಂದ್ ಮತ್ತು ಟ್ರೀಸಾ ಜಾಲಿ ವಿರುದ್ಧ 21-18, 21-17ರ ನೇರ ಸೆಟ್‌ಗಳಿಂದ ಸುಲಭ ಜಯ ಸಾಧಿಸಿದರು. ಈ ಮೂಲಕ ತಂಡ 1-3ರ ಅಂತರದಲ್ಲಿ ಚಿನ್ನಕ್ಕೆ ಕೊರಳೊಡ್ಡಿತು. ಭಾರತ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.