ಬರ್ಮಿಂಗ್‌ಹ್ಯಾಮ್: ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುರಿದಿದ್ದು, 6ನೇ ದಿನ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.
ತುಲಿಕಾ ಮಾನ್ ಅವರು ಇಂದು ನಡೆದ ಮಹಿಳೆಯರ 78 ಕೆಜಿ ವಿಭಾಗದ ಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಪರಾಭವಗೊಳ್ಳುವ ಮೂಲಕ ಬೆಳ್ಳಿಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಜೂಡೋದಲ್ಲಿ ಭಾರತಕ್ಕೆ ಇದು 3ನೇ ಪದಕವಾಗಿದೆ. ಇದನ್ನೂ ಓದಿ: CWG 2022: ಲಾನ್ ಬಾಲ್ಸ್‌ನಲ್ಲಿ ಚಿನ್ನ – ವರ್ಕೌಟ್ ಆಯ್ತು ಧೋನಿ ಟಿಪ್ಸ್!
ತುಲಿಕಾ ಮಾನ್ ಅವರ ಈ ಸಾಧನೆಯೊಂದಿಗೆ ಭಾರತ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 5 ಚಿನ್ನ, 6 ಬೆಳ್ಳಿ ಹಾಗೂ 7 ಕಂಚು ಸಹಿತ 18 ಪದಕಗಳನ್ನು ಪಡೆದುಕೊಂಡಿದ್ದು, ಟಾಪ್-10 ಪಟ್ಟಿಯಲ್ಲೇ ಸ್ಥಾನ ಉಳಿಸಿಕೊಂಡಿದೆ.