ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್‌ – ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಸೂಚನೆ

Public TV
1 Min Read
KRS Dam

ನವದೆಹಲಿ: ತಮಿಳುನಾಡಿಗೆ (Tamil Nadu) ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ (Karnataka) ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ ನೀಡಿದೆ.

ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಜುಲೈ 12 ರಿಂದ 31ರ ವರೆಗೆ ಪ್ರತಿನಿತ್ಯ 1 ಟಿಎಂಸಿ ಹರಿಸವಂತೆ ಶಿಫಾರಸು ಮಾಡಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿ – ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

KRS DAM MYSURU

ಕರ್ನಾಟಕದ ಡ್ಯಾಂಗಳಲ್ಲಿ ಒಳಹರಿವು 41 ಟಿಎಂಸಿ ಇದೆ. ಜೂ.1 ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಸಂಗ್ರಹವಿದೆ. ಸಧ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ. ಜು.25 ರ ವರೆಗೆ ಮಳೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ. ಈಗಲೇ ನೀರು ಬಿಡುವಂತೆ ಶಿಫಾರಸು ಮಾಡಬೇಡಿ ಎಂದು CWRC ಸಭೆಯಲ್ಲಿ ಕರ್ನಾಟಕ ಮನವಿ ಮಾಡಿತು.

ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.

Share This Article