– ಮುಂದಿನ 15 ದಿನ ನೀರು ಬಿಡಲು CWRC ಆದೇಶ
ನವದೆಹಲಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ ಎದುರಾಗಿದೆ. ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಸಿ ಸೂಚನೆ ನೀಡಿದೆ.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಇಂದು ಸಿಡಬ್ಲ್ಯೂಆರ್‌ಸಿ ಸಭೆ ನಡೆಯಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಕರ್ನಾಟಕದಿಂದ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು.

