* ಮುಂದಿನ 15 ದಿನ ನೀರು ಬಿಡಲು CWRC ಆದೇಶ
ನವದೆಹಲಿ: ಕರ್ನಾಟಕಕ್ಕೆ (Karnataka) ಮತ್ತೆ ‘ಕಾವೇರಿ’ (Cauvery Water) ಆಘಾತ ಎದುರಾಗಿದೆ. ತಮಿಳುನಾಡಿಗೆ (Tamil Nadu) ಮುಂದಿನ 15 ದಿನಗಳ ವರೆಗೆ 9,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ.
ಇಂದು ನಡೆದ ಸಿಡಬ್ಲ್ಯೂಆರ್‌ಸಿ (CWRC) ಸಭೆಯಲ್ಲಿ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಲಾಗಿದೆ. 12 ಸಾವಿರ ಬದಲಿಗೆ ಈಗ 9 ಸಾವಿರ ಕ್ಯೂಸೆಕ್ ನೀರು ಬಿಡಲು ತಿಳಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ಸುಪ್ರೀಂ ವಿಚಾರಣೆ ಮುಂದೂಡಿಕೆ
ಮೊದಲ ಬಾರಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಲಾಗಿತ್ತು. ಎರಡನೇ ಬಾರಿಗೆ 12 ಸಾವಿರ, ಈಗ ಮೂರನೇ ಬಾರಿಗೆ 9 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಲಾಗಿದೆ.
ಕಾವೇರಿ ನೀರಿನ ವಿಚಾರವಾಗಿ ಕರ್ನಾಟಕಕ್ಕೆ ಸಾಲು ಸಾಲು ಸವಾಲುಗಳಿವೆ. ನಾಳೆ ಸಿಡಬ್ಲ್ಯೂಎಂಎ ಸಭೆ ಇದೆ. ಮುಂದಿನ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಕೂಡ ಇದೆ. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ – ಇಂದು ಸುಪ್ರೀಂನಲ್ಲಿ ವಿಚಾರಣೆ
