ಬೆಂಗಳೂರು: ಭಾರತದಲ್ಲಿ ಹೆಚ್ಚಾಗಿ ಹರಡುತ್ತಿರುವ ಡೆಡ್ಲಿ ಮೋಮೋ ಗೇಮ್ ಬಗ್ಗೆ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ ನೀಡುತ್ತಿದ್ದಾರೆ.
ಹೌದು, ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವಪೀಳಿಗೆಯು ಬ್ಲೂ ವೇಲ್ ಹಾಗೂ ಮೋಮೋ ಗೇಮ್‍ಗಳಂತಹ ಮಾರಣಾಂತಿಕ ಆಟಗಳಿಗೆ ಮುಗಿಬಿದ್ದು, ತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಪೋಷಕರು ತಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಗಮನಹರಿಸಬೇಕಾಗಿ ಸೈಬರ್ ಕ್ರೈಂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
Advertisement
Advertisement
ಮೋಮೋ ಗೇಮ್ ಗೆ ಸಂಬಂಧಿಸಿದ ಯಾವುದೇ ಲಿಂಕ್‍ಗಳನ್ನು ಶೇರ್ ಹಾಗೂ ಡೌನ್‍ಲೋಡ್ ಮಾಡದಂತೆ ಎಚ್ಚರವಹಿಸುವಂತೆ ಶಾಲಾ ಶಿಕ್ಷಕರು, ಮಕ್ಕಳು ಹಾಗೂ ಪೋಷಕರಿಗೆ ಸಿಐಡಿ ಸೈಬರ್ ಕ್ರೈಂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಎಚ್ಚರವಹಿಸಿ ಎಂದು ಹೇಳಿದ್ದಾರೆ.
Advertisement
ಏನಿದು ಮೋಮೋ ಗೇಮ್?
ವಾಟ್ಸಪ್‍ಗೆ ಮೊದಲು ಅಪರಿಚಿತ ನಂಬರಿನಿಂದ ಒಂದು ಸಂದೇಶದ ಬರುತ್ತದೆ. ಬಳಿಕ ಆ ಚಾಲೆಂಜ್ ಒಪ್ಪಿಕೊಂಡರೆ, ಹಾಯ್-ಹಲೋ ಎಂದು ಸಂದೇಶ ಕಳುಹಿಸಬೇಕಾಗುತ್ತದೆ. ನಂತರ ಒಂದು ಅಪರಿಚಿತ ನಂಬರ್ ಕೊಟ್ಟು ಮಾತನಾಡುವಂತೆ ಅನಾಮಿಕನು ಚಾಲೆಂಜ್ ನೀಡುತ್ತಾನೆ. ಬಳಕೆದಾರರಿಗೆ ಕೆಲವು ಟಾಸ್ಕ್‍ಗಳನ್ನು ನೀಡುತ್ತಾರೆ. ಒಂದು ವೇಳೆ ಆ ಟಾಸ್ಕನ್ನು ಪೂರ್ಣ ಮಾಡದಿದ್ದರೆ, ಬಳಕೆದಾರರಿಗೆ ಬೆದರಿಕೆ ಹಾಕುತ್ತಾರೆ. ಕೊನೆಯದಾಗಿ ಬೆದರಿಕೆ ಮತ್ತು ಭಯದಿಂದ ಬಳಕೆದಾರರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ನೀಡುತ್ತಾರೆ.
Advertisement
we have published an advisory on MOMO CHALLENGE game. Please spread awareness about the issue.https://t.co/rukCZ7m8NM
— Cybercrime CID (@CybercrimeCID) August 27, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv