50 ಲಕ್ಷ ಹಾಕಿದ್ರೂ ಮತ್ತಷ್ಟು ಬೇಡಿಕೆ – ಸೈಬರ್‌ ವಂಚಕರ ಕಾಟ, ವೃದ್ಧ ದಂಪತಿ ಆತ್ಮಹತ್ಯೆ

Public TV
2 Min Read
cyber frauds An elderly couple commits suicide khanpura Belagavi

– ಇಂಗ್ಲಿಷ್‌ನಲ್ಲಿ ಡೆತ್‌ನೋಟ್‌ ಬರೆದ ದಂಪತಿ
– ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಘಟನೆ

ಬೆಳಗಾವಿ: ಸೈಬರ್‌ (Cyber Crime) ವಂಚಕರ ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.

ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ. ಆತ್ಮಹತ್ಯೆಗೆ ಮುನ್ನ ದಂಪತಿ (Elderly Couple) ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ ಲಭ್ಯವಾಗಿದೆ.

ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ: ಸಿಬಿಐ ವರದಿ

ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್‌ ಪ್ರತಿಕ್ರಿಯಿಸಿ, ಸೈಬರ್ ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂ. ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಸುಮ್ಮನಾಗದೇ ಮತ್ತೆ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ಇದರಿಂದ ತಮ್ಮ ಜೀವನವನ್ನು ಕೊನೆಗೊಳಿಸಲು ದಂಪತಿ ನಿರ್ಧರಿಸಿದ್ದರು. ತಮ್ಮ ಡೆತ್ ನೋಟ್‌ನಲ್ಲಿ, ದಂಪತಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ. ಅದನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕೆಂದು ಹೇಳಿದ್ದಾರೆ ಎಂದು ತಿಳಿಸಿದರು.

cyber frauds An elderly couple commits suicide khanpura Belagavi

ಡೆತ್‌ನೋಟ್‌ನಲ್ಲಿ ಏನಿದೆ?
ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ‍್ಯಾಂಚ್‌ನಿಂದ ನಮಗೆ ವಿಡಿಯೋ ಕರೆ ಬಂದಿತ್ತು. ಆ ಕರೆಯಲ್ಲಿ ನೀವು ಅಪರಾಧ ಒಂದರಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಕೆ ಹಾಕಲಾಗಿತ್ತು. ಬಳಿಕ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಭಯಗೊಂಡು ನಾವು ಅವರು ಹೇಳಿದ ಖಾತೆಗೆ ಹಣ ಹಾಕಿದ್ದೆವು.

ಹಣ ಪಾವತಿ ಮಾಡಿದ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅರೆಸ್ಟ್‌ ಮಾಡುತ್ತೇವೆ ಎಂದು ಬೆದರಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾರೆ. ಡೆತ್ ನೋಟ್‌ನಲ್ಲಿ ದಂಪತಿ ತಮ್ಮ ದೇಹವನ್ನು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಗೆ ದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

ಮೃತ ಡಿಯಾಗೋ ಮಹಾರಾಷ್ಟ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ಇತರ ಪರೀಕ್ಷೆಗಳಿಗೆ ತರಬೇತಿ ನೀಡಿದ್ದರು. ದಂಪತಿಯ ಶವವನ್ನು ಹಸ್ತಾಂತರಿಸಿದ್ದರೂ ತಾಂತ್ರಿಕ ಕಾರಣಗಳಿಂದ ಬಿಐಎಂಎಸ್ ಶವಗಳನ್ನು ಸ್ವೀಕರಿಸಲಿಲ್ಲ. ನಂತರ ನಂತರ ಎರಡೂ ಶವಗಳನ್ನು ಬೀಡಿ ಸ್ಮಶಾನದಲ್ಲಿ ಸಮಾಧಿ ಮಾಡಲಾಗಿದೆ.

 

ಬೆಳಕಿಗೆ ಬಂದಿದ್ದು ಹೇಗೆ?
ವೃದ್ಧ ದಂಪತಿ ಮನೆಗೆ ಇಂದು ನೆರೆ ಮನೆಯ ಮಹಿಳೆ ಎಂದಿನಂತೆ ಬಂದಿದ್ದಾರೆ. ಎಷ್ಟು ಕರೆದರೂ ಬಾಗಿಲು ತೆಗೆಯದ ಕಾರಣ ಕಿಟಕಿಯಿಂದ ವೃದ್ಧ ದಂಪತಿಯ ಮೃತದೇಹ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ‌ನಂದಗಡ‌ ಠಾಣೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ವೃದ್ಧ ದಂಪತಿ ಮೃತ ದೇಹಗಳನ್ನು ಮರಣೋತ್ತರ ‌ಪರೀಕ್ಷೆಗೆ ಬಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share This Article