ಲಾರಿ ಡಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲೇ ಸಾವು

Public TV
1 Min Read
Accident 1 1

ಬೆಂಗಳೂರು: ಸೈಕಲ್ ಸವಾರನಿಗೆ (Cyclist) ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಲುಕ್ಯ ಸರ್ಕಲ್‌ನಲ್ಲಿ (Chalukya Circle) ನಡೆದಿದೆ.

ಮೃತ ಸೈಕಲ್ ಸವಾರ ರಾಜಸ್ಥಾನ (Rajasthan) ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ. ಸೈಕಲ್ ಸವಾರ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಹೈಗ್ರೌಂಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮಳೆಗೆ 15 ಸಾವು, 23 ಸಾವಿರ ಮಂದಿ ಸ್ಥಳಾಂತರ

ಘಟನೆ ಸಂಬಂಧ ಹೈಗ್ರೌಂಡ್ ಸಂಚಾರಿ ಪೊಲೀಸರು ಲಾರಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

Share This Article