ಕೋಲ್ಕತ್ತಾ: ಡಾನಾ ಚಂಡಮಾರುತ (Cyclone Dana ) ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ (Odisha) ಮತ್ತು ಪಶ್ಚಿಮ ಬಂಗಾಳದ (West Bengal) ಕರಾವಳಿ ಭಾಗದಲ್ಲಿ ಸಂಚರಿಸುವ 150 ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ (Express Trains) ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ (Indian Railways) ರದ್ದುಗೊಳಿಸಿದೆ.
ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್‌ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್‌ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 23 ಮತ್ತು ಅಕ್ಟೋಬರ್ 25 ರ ನಡುವೆ ಸಂಚರಿಸುವ ರೈಲುಗಳನ್ನು ರದ್ದುಗೊಳಿಸುವುದಾಗಿ ಆಗ್ನೇಯ ರೈಲ್ವೆ ವಲಯದ (SER) ಪ್ರಕಟಿಸಿದೆ. ಇದನ್ನೂ ಓದಿ: ಶಾಂತಿ ಮಾತುಕತೆ ಯಶಸ್ವಿ – 5 ವರ್ಷದ ಬಳಿಕ ನಡೆಯಲಿದೆ ಮೋದಿ-ಜಿನ್‌ಪಿಂಗ್ ದ್ವಿಪಕ್ಷೀಯ ಸಭೆ
Advertisement
Advertisement
ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋದರೆ ಆಗ್ನೇಯ ರೈಲ್ವೆ ವಲಯದ ಮತ್ತಷ್ಟು ರೈಲುಗಳನ್ನು ರದ್ದುಗೊಳಿಸಲಾಗುತ್ತದೆ. ಪೂರ್ವ ರೈಲ್ವೆ ಅಕ್ಟೋಬರ್ 24 ರಿಂದ 25 ರವರೆಗೆ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ಡಾನಾ ಚಂಡಮಾರುತ | 14 ಜಿಲ್ಲೆಗಳಲ್ಲಿ ಶಾಲೆಗಳು ಬಂದ್, 800 ಪರಿಹಾರ ಕೇಂದ್ರ ಸ್ಥಾಪನೆ, ಒಡಿಶಾ-ಬಂಗಾಳದಲ್ಲಿ ಫುಲ್ ಅಲರ್ಟ್
Advertisement
ಬಂಗಾಳ ಕೊಲ್ಲಿಯಲ್ಲಿ (Bay of engal) ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: THAAD ಎಂದರೇನು? ಇಸ್ರೇಲ್‌ಗೆ ಅಮೆರಿಕ ಕಳುಹಿಸಿದ್ದು ಯಾಕೆ?
Advertisement
ಪೂರ್ವ– ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶವನ್ನು ಅಪ್ಪಳಿಸಲಿದೆ.
ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಪುರಿ ಮತ್ತು ಸಾಗರ್ ದ್ವೀಪದ ನಡುವೆ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ.