ನವದೆಹಲಿ: ಬಂಗಾಳಕೊಲ್ಲಿಯಲ್ಲಿ `ದಿತ್ವಾಹ್’ (Ditwah) ಎಂಬ ಹೊಸ ಚಂಡಮಾರುತ ರೂಪುಗೊಂಡಿದ್ದು, ನ.30ಕ್ಕೆ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿದೆ.
`ಸೆನ್ಯಾರ್’ ಚಂಡಮಾರುತ ದುರ್ಬಲಗೊಳ್ಳುತ್ತಿದ್ದು, ಇತ್ತ ನೈಋತ್ಯ ಬಂಗಾಳಕೊಲ್ಲಿ ಹಾಗೂ ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ ಮುಂದಿನ 12 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ರೂಪುಗೊಳ್ಳಲಿದ್ದು, ನ.30ರೊಳಗೆ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಕರಾವಳಿಗೆ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಜೊತೆಗೆ ಗಂಟೆಗೆ 80-90 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.ಇದನ್ನೂ ಓದಿ: ಬರ್ತಿದೆ `ಸೆನ್ಯಾರ್’ ಚಂಡಮಾರುತ – ತಮಿಳುನಾಡು, ಕೇರಳ ಸೇರಿ ಕೆಲ ರಾಜ್ಯಗಳಿಗೆ ಮಳೆ ಮುನ್ನೆಚ್ಚರಿಕೆ: IMD
ನ.28 ಮತ್ತು 29ರಂದು ಚೆನ್ನೈ, ನಾಗಪಟ್ಟಣಂ, ತಿರುವಳ್ಳೂರು, ತಂಜಾವೂರು ಸೇರಿದಂತೆ ತಮಿಳುನಾಡಿನ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೇಂಜ್ ಅಲರ್ಟ್ ನೀಡಲಾಗಿದೆ. ಸೆನ್ಯಾರ್ ಚಂಡಮಾರುತದ ಪರಿಣಾಮ ಮುಂದಿನ ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಭಾರೀ ಮಳೆಯಾಗಲಿದೆ. ಇನ್ನೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದಾರೆ.
ಇನ್ನೂ ಈ ಚಂಡಮಾರುತಕ್ಕೆ ಯೆಮೆನ್ ನೀಡಿರುವ ದಿತ್ವಾಹ್ ಹೆಸರನ್ನು ಇಡಲಾಗಿದೆ.ಇದನ್ನೂ ಓದಿ: Explainer: ಇಥಿಯೋಪಿಯಾ ಜ್ವಾಲಾಮುಖಿ ಸ್ಫೋಟ – ಭಾರತಕ್ಕೂ ಬಂತು ಹೊಗೆ ಬೂದಿ

