ಬೆಂಗಳೂರು: ಸೈಕ್ಲೋನ್ ಎಫೆಕ್ಟ್ ನಿಂದ ಸಿಲಿಕಾನ್ ಸಿಟಿ ಇಂದು ಮತ್ತೆ ಕೂಲ್ ಕೂಲ್ ಆಗಿದೆ. ನೈಋತ್ಯ ಬಂಗಾಳಕೊಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Department) ಮಾಹಿತಿ ನೀಡಿದೆ.
Advertisement
ಬೆಳ್ಳಗ್ಗೆಯಿಂದಲೇ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ನಿನ್ನೆಯಿಂದ ನಗರದ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಮಳೆ ಜೊತೆಗೆ ಚಳಿನೂ ಇದ್ದು, ಬೆಳಗ್ಗೆದ್ದು ಕೆಲಸಕ್ಕೆ ಹೋಗುವವರೊಗೆ ಕೊಂಚ ಕಿರಿಕಿರಿ ಉಂಟು ಮಾಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ದೇವಿ ಕನಸಲ್ಲಿ ಬಂದು ನಿಧಿ ತೋರಿಸಿದ್ಲು ಅಂತಾ ಅರಣ್ಯದಲ್ಲಿ ಬಾವಿ ತೋಡಿ ನಿಧಿ ಹುಡುಕ್ತಿದ್ದ ನಾಲ್ವರು ಅರೆಸ್ಟ್
Advertisement
Advertisement
ಇಂದಿನಿಂದ 3 ದಿನ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಳೆ ದಕ್ಷಿಣ ಒಳನಾಡನ್ನು ಕಾಡಲಿದ್ದು, ಬೆಂಗಳೂರು (Bengaluru) ಸೇರಿದಂತೆ ದಕ್ಷಿಣ ಒಳನಾಡಿದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯಿದೆ. ಬಳಿಕ 2 ದಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.