ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದೆ. ಕಳೆದ 2 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಅದ್ಯಪಾಡಿಯಲ್ಲಿ ಭೂಕುಸಿತವಾಗಿದೆ.
ಬಜಪೆ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಸಂಭವಿಸಿದ್ದು, ಬಜಪೆ-ಅದ್ಯಪಾಡಿಯ ಸಂಪರ್ಕ ಕಡಿತಗೊಂಡಿದೆ. ಮಂಗಳೂರು ವಿಮಾನನಿಲ್ದಾಣ ಕೆಳಭಾಗದಲ್ಲಿ ಅದ್ಯಪಾಡಿ ಪ್ರದೇಶ ಇದೆ.
Advertisement
ವಿಮಾನ ನಿಲ್ದಾಣ ಭಾಗದಿಂದ ಮಣ್ಣು ನೀರು ಹರಿದುಬಂದಿದೆ. ಗುಡ್ಡದ ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬವರ ಮನೆಗೆ ಹಾನಿಯಾಗಿದೆ. ಮನೆಯ ಮುಂಭಾಗದ ಅಂಗಳದಲ್ಲಿ ಮಣ್ಣು ಕೆಸರು ತುಂಬಿಕೊಂಡಿದೆ.